ಉತ್ತರ ಕನ್ನಡ: ಕೊರೊನಾ ಎರಡನೇ ಅಲೆಗೆ ಜನರು ಹೈರಾಣಾಗಿದ್ದಾರೆ. ಈ ನಡುವೆಯೆ ಉತ್ತರ ಕನ್ನಡ ಜಿಲ್ಲೆಯ ಒಂದೇ ಕುಟುಂಬದ 18 ಸದಸ್ಯರು ಕೊರೊನಾ ವಿರುದ್ಧ ಹೋರಾಟದಲ್ಲಿ ಗೆದ್ದಿದ್ದಾರೆ.

ಅವಿಭಕ್ತ ಕುಟುಂಬದ 18 ಸದಸ್ಯರಿಗೆ ಕೊರೊನಾ ಸೋಂಕು ತಗುಲಿತ್ತು. ಆದ್ರೆ ಅವರೆಲ್ಲೂ ಆತ್ಮಸ್ಥೆರ್ಯ ಹಾಗೂ ಒಗ್ಗಟ್ಟಿನಿಂದಾಗಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯ ಸರಕುಳಿ ಗ್ರಾಮದ ಲೋಕೇಶ್ವರ ರಾಮಚಂದ್ರ ಹೆಗಡೆಯವರ ಮನೆಯಲ್ಲಿ, ಒಬ್ಬರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆ ಮಾಡಿಸಲಾಗಿತ್ತು. ಆಗ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ಇದಾದ ಬೆನ್ನಲ್ಲೆ ಅವರ ಕುಟುಂಬಸ್ಥರೆಲ್ಲರೂ ಪರೀಕ್ಷೆ ಮಾಡಿಸಿದಾಗ ಉಳಿದ 17 ಜನರಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಆದ್ರೆ ಯಾರೂ ಸಹ ಧೃತಿಗೆಡದೆ ಒಗ್ಗಟ್ಟಿನಿಂದ ಸರ್ಕಾರದ ಕೊರೊನಾ ನಿಯಮಗಳನ್ನ ಪಾಲಿಸಿ ಮನೆಯಲ್ಲಿಯೇ ಅಗತ್ಯವಿರುವ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸೋಂಕು ಊರಿನಲ್ಲಿ ಹರಡದಂತೆ ಜಾಗ್ರತೆ ವಹಿಸುವ ಮೂಲಕ ಅವಿಭಕ್ತ ಕುಟುಂಬಗಳ ಒಗ್ಗಟ್ಟು ಹಾಗು ಸಾಮಾಜಿಕ ಕಳಕಳಿಗೆ ಸಾಕ್ಷಿ ಎಂದು ತೋರಿಸಿಕೊಟ್ಟಿದ್ದಾರೆ.

The post ಒಗ್ಗಟ್ಟಿಂದ ಕೊರೊನಾ ಗೆದ್ದ ಜಾಯಿಂಟ್​​ ಫ್ಯಾಮೆಲಿ.. ಕುಟುಂಬದ 18 ಸದಸ್ಯರು ಗುಣಮುಖ appeared first on News First Kannada.

Source: newsfirstlive.com

Source link