ಬೆಂಗಳೂರು: ಕೊರೊನಾ ಭೀಕರತೆ ಬೆಂಗಳೂರಿಗರನ್ನು ತಲ್ಲಣಿಗೊಳಿಸುತ್ತಿದ್ದು, ಬೆಂಗಳೂರು ಕೊರೊನಾ ಎರಡನೇ ಅಲೆ ಹೊಡೆತಕ್ಕೆ ತತ್ತರಿಸಿ ಹೋಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತಿನಿತ್ಯ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಾಮೂಹಿಕ ಅಂತ್ಯ ಸಂಸ್ಕಾರ ನಡೆಸುವ ಘನಘೋರ ಸ್ಥಿತಿಗೆ ತಲುಪಿದೆ.

ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರ ನಡೆಸಲು ಎದುರಾಗಿದ್ದ ಸಮಸ್ಯೆ ಬಗೆಹರಿಸಲು ನಗರದ ತಾವರೆಕೆರೆ ಬಳಿ ರಾಜ್ಯ ಸರ್ಕಾರ ಚಿತಾಗಾರ ಸ್ಥಾಪನೆ ಮಾಡಿದ್ದು, ಈಗಾಗಲೇ ಸಾಕಷ್ಟು ಕೋವಿಡ್ ಮೃತದೇಹಗಳ ಅಂತ್ಯಕ್ರಿಯೆ ಸ್ಥಳದಲ್ಲಿ ನಡೆಯುತ್ತಿದೆ.
ತಾವರೆಕೆರೆಯ ಹೊಸ ಚಿತಾಗಾರದಲ್ಲಿ ಒಂದೇ ಸಮಯಕ್ಕೆ 20 ಮೃತದೇಹ ಅಂತ್ಯಕ್ರಿಯೆ ಮಾಡಬಹುದಾದ ವ್ಯವಸ್ಥೆಯನ್ನು ಮಾಡಿದ್ದು, ಸುಮಾರು ಸುಮಾರು 4 ಎಕರೆ ಪ್ರದೇಶದಲ್ಲಿ ಚಿತಾಗಾರ ನಿರ್ಮಾಣ ಮಾಡಲಾಗಿದೆ. ಈವರೆಗೆ 26 ಮೃತದೇಹಗಳ ಅಂತ್ಯಕ್ರಿಯೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ.

ಕೊರೊನಾ ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡಿರುವ ಜನರು ಸರ್ಕಾರಕ್ಕೆ ಛಿಮಾರಿ ಹಾಕುತ್ತಿದ್ದು, ಚಿತಾಗಾರ ಸಿದ್ಧಮಾಡುವ ಅತುರತೆಯನ್ನು ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್​​ ವ್ಯವಸ್ಥೆ ಮಾಡಿದ್ದರೆ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರಲಿಲ್ಲ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ನ್ಯೂಸ್​ಫಸ್ಟ್​ ಕಳಕಳಿ:
ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಮಾಸ್ಕ್ ಧರಿಸಿ, ಸೋಶಿಯಲ್ ಡಿಸ್ಟನ್ಸ್ ಕಾಪಾಡಿ. ಕೈ ತೊಳೆಯುತ್ತಿರಿ. ಮತ್ತು ಮೇ 1 ರಿಂದ 18ರ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಅರ್ಹರಾಗಿದ್ದು ರೆಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ https://www.cowin.gov.in/ ಇಲ್ಲಿಗೆ ಭೇಟಿ ಕೊಟ್ಟು ನೊಂದಣಿ ಮಾಡಿಕೊಳ್ಳಿ. ಮತ್ತೊಂದು ಮುಖ್ಯ ಸಂಗತಿ ಗಮನಿಸಿ CoWin ಆ್ಯಪ್ ಸಾರ್ವಜನಿಕರಿಗೆ ಅಲ್ಲ. ಹೀಗಾಗಿ ಕಡ್ಡಾಯವಾಗಿ ವೆಬ್​ಸೈಟ್​ನಲ್ಲಿಯೇ ನೊಂದಾಯಿಸಿಕೊಳ್ಳಬೇಕು.

The post ಒಟ್ಟೊಟ್ಟಿಗೇ ಹೊತ್ತಿ ಉರಿಯುತ್ತಿವೆ ಚಿತೆಗಳು; ಬೆಂಗಳೂರಿಗೆ ಹೆಚ್ಚುತ್ತಿಗೆ ಕ್ಷಣ ಕ್ಷಣಕ್ಕೂ ಕಂಟಕ appeared first on News First Kannada.

Source: newsfirstlive.com

Source link