ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಒನ್ ನೇಷನ್ ಒನ್ ರೇಷನ್​ ಕಾರ್ಡ್​ ಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸುಪ್ರೀಂಕೋರ್ಟ್ ಹೇಳಿದೆ. ಒನ್ ರೇಷನ್ ಒನ್ ರೇಷ್ ಕಾರ್ಡ್ ಯೋಜನೆಯಿಂದಾಗಿ ವಲಸಿಗ ಕಾರ್ಮಿಕರು ತಾವು ಕೆಲಸ ಮಾಡುತ್ತಿರುವಲ್ಲಿಯೇ ರೇಷನ್ ಪಡೆಯಲು ಸಹಾಯವಾಗುತ್ತದೆ ಎಂದಿದೆ.

ಇದೇ ವೇಳೆ ಕೇಂದ್ರ ಸರ್ಕಾರ ಸಾಫ್ಟ್​ವೇರ್ ಡೆವಲಪ್​ ಮಾಡಿ ಅಸಂಘಟಿತ ಕಾರ್ಮಿಕರನ್ನ ನೋಂದಣಿ ಮಾಡಿಕೊಳ್ಳುವ ವಿಚಾರದಲ್ಲಿ ತಡ ಮಾಡುತ್ತಿದೆ ಎಂದಿದೆ. ಜಸ್ಟೀಸ್ ಅಶೋಕ್ ಭೂಷಣ್, ಹರ್ಷ ಮಂದೆರ್ ಮತ್ತು ಜಗ್​ದೀಪ್ ಚೋಕರ್​ರ ಪೀಠ.. ವಲಸಿಗ ಕಾರ್ಮಿಕರಿಗೆ ಆಹಾರ ಸುರಕ್ಷತೆ, ಹಣ ವರ್ಗಾವಣೆ, ಸಾರಿಗೆ ಸೌಲಭ್ಯದ ಬಗ್ಗೆ ನಿರ್ದೇಶನ ನೀಡುವಂತೆ ಹೇಳಿದೆ.

ಈ ವೇಳೆ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ದೆಹಲಿ, ಪಶ್ಚಿಮ ಬಂಗಾಳ, ಛತ್ತೀಸ್​ಘಡ ಮತ್ತು ಅಸ್ಸಾಂ ರಾಜ್ಯಗಳು ಒನ್ ರೇಷನ್ ಒನ್ ಕಾರ್ಡ್ ಯೋಜನೆಯನ್ನ ಜಾರಿಗೊಳಿಸದಿರುವ ಕುರಿತು ಪ್ರಸ್ತಾಪಿಸಿದ್ದಾರೆ. ಈ ವೇಳೆ ದೆಹಲಿ ಸರ್ಕಾರದ ಪರ ವಕೀಲ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೋರ್ಟ್​ ಈ ಯೋಜನೆಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು.. ಇದರಿಂದ ವಲಸಿಗ ಕಾರ್ಮಿಕರಿಗೆ ಸಹಾಯವಾಗಲಿದೆ ಎಂದು ಹೇಳಿದೆ.

The post ‘ಒನ್​ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆ ಜಾರಿಗೊಳಿಸಲು ರಾಜ್ಯಗಳಿಗೆ ಹೇಳಿದ ಸುಪ್ರೀಂ appeared first on News First Kannada.

Source: newsfirstlive.com

Source link

Leave a comment