ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿಗದಿಯಾಗಿದ್ದ ಟಿ20 ಸರಣಿಯನ್ನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ದೀರ್ಘ ಕಾಲದ ಚರ್ಚೆ ಬಳಿಕ ಈ ನಿರ್ಧಾರಕ್ಕೆ ಬಂದಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ ಶಾ ತಿಳಿಸಿದ್ದಾರೆ.
ನ್ಯೂಜಿಲೆಂಡ್ ಟೆಸ್ಟ್ ಸರಣಿ ಟೀಮ್ ಇಂಡಿಯಾ, ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯನ್ನ ಮಾತ್ರ ಆಡಲಿದೆ ಎಂದು ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ನಾಲ್ಕು ಪಂದ್ಯಗಳ ಟಿ20 ಸರಣಿಯನ್ನ ಕೆಲ ದಿನಗಳ ಬಳಿಕ ಆಯೋಜಿಸಲು ಬಿಸಿಸಿಐ ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ ತೀರ್ಮಾನಿಸಿವೆ.