ನವದೆಹಲಿ: ಇತ್ತೀಚಿಗೆ ಸ್ವಾತಂತ್ರ್ಯದ ಬಗ್ಗೆ ಪದ್ಮಶ್ರೀ ಪುರಸ್ಕೃತೆ ನಟಿ ಕಂಗನಾ ರಣಾವತ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ದೇಶದ್ಯಾಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಸದ್ಯ ಕಂಗನಾ ಹೇಳಿಕೆಗೆ ಮಹಾತ್ಮಾ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಕೂಡ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ತುಷಾರ್ ಗಾಂಧಿ, ಪದ್ಮಶ್ರೀ ಪುರಸ್ಕೃತೆ ಕಂಗನಾ ದ್ವೇಷ, ಅಸಹಿಷ್ಣುತೆ ಮತ್ತು ಅವಿವೇಕದ ಏಜೆಂಟ್ ಆಗಿದ್ದಾರೆ. ದೇಶದಲ್ಲಿ 2014ರಿಂದ ದ್ವೇಷ, ಕೋಮುವಾದ ಬಿತ್ತಲು ಕಂಗನಾ ಅಧಿಕೃತವಾಗಿ ರಾಯಭಾರಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಮ್ಮ ದೇಶದಲ್ಲಿ ಸದ್ಯ ಪ್ರಧಾನ ಮಂತ್ರಿ ಕಚೇರಿಯೇ ದ್ವೇಷದ ಚಿಲುಮೆಯಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆ ಕಂಗನಾ ಹೇಳಿಕೆ ವಿರೋಧಿಸಿ ಬಿಜೆಪಿ ಸಂಸದ ವರಣ ಗಾಂಧಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು ಟ್ವೀಟ್ ಮಾಡಿ ಚಾಟಿ ಬೀಸಿದ್ದರು.
ಇದನ್ನೂ ಓದಿ;ದೇಶಕ್ಕೆ 1947ರಲ್ಲಿ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ ಸಿಕ್ಕಿದ್ದು ನಿಜವಾದ ಸ್ವಾತಂತ್ರ್ಯ -ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್