ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಎರಡು ಕಂದಮ್ಮಗಳ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯಿಸಿದ್ದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಹೆಚ್ಒ ಡಾ.ಎಸ್.ವಿ.ಮುನ್ಯಾಳ್ ಮಕ್ಕಳ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ. ರಕ್ತದ ಮಾದರಿ, ಮಲಮೂತ್ರದ ಮಾದರಿ ರವಾನೆ ಮಾಡಿದ್ದೇವೆ. ಇದರಲ್ಲಿ ಯಾವುದೇ ಸಿಬ್ಬಂದಿ ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.