ಕಂದಮ್ಮಗಳ ನಿಗೂಢ ಸಾವು ಪ್ರಕರಣದ ತನಿಖೆಗೆ ಇಬ್ಬರು ಹಿರಿಯ ಅಧಿಕಾರಿಗಳ ನೇಮಕ


ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಿಗೂಢವಾಗಿ ಕಂದಮ್ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಈ ಕೇಸ್​ನ ತನಿಖೆಗೆ ಇಬ್ಬರು ಹಿರಿಯ ಅಧಿಕಾರಿಗಳನ್ನು ನೇಮಿಸಲಾಗಿದೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಸೂಚನೆ ಮೇರೆಗೆ ಪ್ರಕರಣದ ತನಿಖೆಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಆರೋಗ್ಯ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಡಾ.ಪ್ರಭು ಬಿರಾದಾರ ಮತ್ತು ಇನ್ನೋರ್ವ ಅಧಿಕಾರಿ ಡಾ.ಸಿದ್ದಲಿಂಗಯ್ಯ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸಚಿವರು ಆದೇಶ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್. ಬೆಳಗಾವಿ ಜಿಲ್ಲೆಯ ಬಿಮ್ಸ್​ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 3 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿವೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನ ಸಸ್ಪೆಂಡ್‌ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

News First Live Kannada


Leave a Reply

Your email address will not be published. Required fields are marked *