ಬೆಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಂಬಣ್ಣ (37) ಮತ್ತು ಭೀಮರಾವ್ (47) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರೆಲ್ಲ ಗುಲ್ಬರ್ಗ ಮೂಲದವರು ಎಂದು ತಿಳಿದುಬಂದಿದೆ. ಏಕಾಏಕಿ ‌ಮಣ್ಣು ಕುಸಿದ ಪರಿಣಾಮ 7 ಮಂದಿ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಇತರೆ ಕಾರ್ಮಿಕರು ಐವರನ್ನ ರಕ್ಷಣೆ ಮಾಡಿದ್ದಾರೆ.

ದುರ್ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಹಾಗೇ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾರತ್ತಹಳ್ಳಿಯ ದೇವರ ಬಿಸನಹಳ್ಳಿಯಲ್ಲಿ ಬಳಿ ನಿರ್ಮಾಣ ಹಂತದ ಕಾಮಗಾರಿ ನಡೆಯುತ್ತಿತ್ತು.

The post ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ; ಮಣ್ಣು ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ appeared first on News First Kannada.

Source: newsfirstlive.com

Source link