ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಬ್ರೇನ್​ ಡೆಡ್​ ಆಗಿದ್ದಾರೆ ಎಂದು ಅಪೊಲೋ ಆಸ್ಪತ್ರೆ ತಿಳಿಸಿದೆ. ಕುಟುಂಬಸ್ಥರ ನಿರ್ಧಾರದಂತೆ ಸಂಚಾರಿ ವಿಜಯ್ ಅವರ ಅಂಗಾಂಗ ದಾನ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ನಿರ್ದೇಶಕ ಮಂಸೋರೆ.. ನಾಳೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ಸಂಚಾರಿ ವಿಜಯ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಇದಾದ ನಂತರ ಕಡೂರಿನ ಪಂಚನಹಳ್ಳಿಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸರ್ಕಾರದ ಕಡೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲರು ಮಾಸ್ಕ್ ಧರಿಸಿ.. ನೋಡಲೇ ಬೇಕಾದವರು ಬನ್ನಿ ಅಂತಾ ಮನವಿ ಮಾಡಿಕೊಂಡಿದ್ದಾರೆ.

The post ಕಡೂರಿನ ಪಂಚನಹಳ್ಳಿಯಲ್ಲಿ ನಾಳೆ ಸಂಚಾರಿ ವಿಜಯ್​​ ಅಂತ್ಯಕ್ರಿಯೆ -ಮಂಸೋರೆ appeared first on News First Kannada.

Source: newsfirstlive.com

Source link