ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಪ್ಪು​​​​​ ಚಿತ್ರ ಬಿಡಿಸಿದ ವಿದ್ಯಾರ್ಥಿಗಳು


ಪವರ್​​ ಸ್ಟಾರ್​​ ಪುನೀತ್​​ ರಾಜಕುಮಾರ್ ನಮ್ಮನ್ನ ಅಗಲಿ ಇಂದಿಗೆ ಒಂದು ವಾರ. ಆದರೂ ಅವರ ನೆನಪು ಮಾತ್ರ ಇಂದಿಗೂ ಇದೆ. ಈಗ ಅಪ್ಪು ನೆನಪಿಗೋಸ್ಕರ ದಾವಣಗೆರೆ ಸಿದ್ದಗಂಗಾ ಶಾಲಾ ವಿದ್ಯಾರ್ಥಿಗಳು ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪುನೀತ್​​ ಚಿತ್ರ ಬಿಡಿಸಿದ ವಿದ್ಯಾರ್ಥಿಗಳು ಅವರ ಸಾಧನೆಯನ್ನೂ ಬಣ್ಣಿಸಿದ್ದಾರೆ. ತಮ್ಮ ಕೈ ಚಳಕದಿಂದ ಸುಂದರ ಚಿತ್ರ ಬಿಡಿಸಿದ ವಿದ್ಯಾರ್ಥಿಗಳು ಈ ಮೂಲಕ ಅಭಿಮಾನದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ವಿಶೇಷ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು ವಿದ್ಯಾರ್ಥಿಗಳ ಕಲೆಗೆ ಮೆಚ್ಚುಗೆ ವ್ಯಕ್ತವಾಗಿದೆ.

News First Live Kannada


Leave a Reply

Your email address will not be published. Required fields are marked *