ಕನಿಷ್ಠ 3 ಸಾವು..20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ


ನೆರೆಯ ಪಾಕಿಸ್ತಾನದ ಲಾಹೋರ್​ನಲ್ಲಿ ಭೀಕರ ಬಾಂಬ್​ ಸ್ಫೋಟಗೊಂಡಿದೆ. ಲಾಹೋರ್​ನ ಅನಾರ್ಕಲಿ ಮಾರುಕಟ್ಟೆ ಪ್ರಾಂಗಣದಲ್ಲಿ ಈ ಸ್ಫೋಟ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ. 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತಾ ಲಾಹೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಅಂತಾ ಡಾನ್ ಪತ್ರಿಕೆ ವರದಿ ಮಾಡಿದೆ.

ಭಾರತದ ಅತ್ತಾರಿ ಬಾರ್ಡರ್​ನಿಮದ ಕೇವಲ 28 ಕಿಮೀ ಅಂತರದಲ್ಲಿ ಈ ದುರಂತ ಸಂಭವಿಸಿದ್ದು ಸಾಕಷ್ಟು ಆತಂಕ ಉಂಟು ಮಾಡಿದೆ. ಸುಧಾರಿತ ಸ್ಫೊಟಕ ಸಾಧನ (IED) ಬಳಸಿ ಈ ಕೃತ್ಯವನ್ನು ಎಸಗಲಾಗಿದೆ ಎನ್ನಲಾಗ್ತಿದ್ದು, ಸ್ಫೋಟದ ತೀವ್ರತೆಗೆ ಸುತ್ತಲಿನ ಮನೆ, ಕಟ್ಟಡಗಳಿಗೆ ಹಾನಿಯಾಗಿದೆ ಎಂದು ವರದಿಗಳಾಗಿವೆ.

News First Live Kannada


Leave a Reply

Your email address will not be published. Required fields are marked *