ಕನ್ನಡಿಗ ಮಯಾಂಕ್ ಅಗರ್ವಾಲ್ ಹಾಗೂ ಅರ್ಷ್ ದೀಪ್ ಸಿಂಗ್ ಕುರಿತು ವಿಶೇಷವಾಗಿ ಮಾತನಾಡಿದ್ದಾರೆ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕ ನೆಸ್ ವಾಡಿಯಾ. ಈ ಸಂಬಂಧ ಮಾತಾಡಿದ ನೆಸ್ ವಾಡಿಯಾ, ಪಂಜಾಬ್ ಕಿಂಗ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡಿದ ಮಯಾಂಕ್ ಅಗರ್ವಾಲ್ ಮತ್ತು ಅರ್ಷ್ ದೀಪ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಂಡಿರುವುದು ತುಂಬಾ ಸಂತಸದ ವಿಷಯ ಎಂದರು.
ಮಯಾಂಕ್ ಅಗರ್ವಾಲ್ ತಂಡದ ಓರ್ವ ಅತ್ಯದ್ಭುತ ಆಟಗಾರ. ಅರ್ಷ್ ದೀಪ್ ಸಿಂಗ್ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಹೇಳಿಕೆ ನೀಡಿದರು.