ಕಪ್ಪು ಟರ್ಬನ್ , ಕುರ್ತಾ ಧರಿಸಿ ಬೆಲೆ ಏರಿಕೆ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪ್ರತಿಭಟನೆ | Mallikarjun Kharge wears a black kurta and turban in protest against price rise and unemployment


ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ರಾಷ್ಟ್ರಪತಿ ಭವನಕ್ಕೆ ಮಾರ್ಚ್ ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಲಿದೆ.

ಕಪ್ಪು ಟರ್ಬನ್ , ಕುರ್ತಾ ಧರಿಸಿ ಬೆಲೆ ಏರಿಕೆ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ

ದೆಹಲಿ: ದೇಶದಲ್ಲಿ ಬೆಲೆ ಏರಿಕೆ (price rise)ಮತ್ತು ನಿರುದ್ಯೋಗ ಸಮಸ್ಯೆ ಖಂಡಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು ರಾಜ್ಯಸಭೆಯ ವಿಪಕ್ಷ ನೇತಾರ ಮಲ್ಲಿಕಾರ್ಜುನ ಖರ್ಗೆ (Mallikarjun Kharge )ಇಂದು ಕಪ್ಪು ಟರ್ಬನ್ ಮತ್ತು ಕುರ್ತಾ ತೊಟ್ಟು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ (Congress) ರಾಷ್ಟ್ರಪತಿ ಭವನಕ್ಕೆ ಮಾರ್ಚ್ ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಲಿದೆ. ಬೆಲೆ ಏರಿಕೆ ಮತ್ತು ಜಿಎಸ್​​ಟಿ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಉಭಯ ಸದನಗಳಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸುತ್ತಿವೆ. ಕಾಂಗ್ರೆಸ್ ಸಂಸದರು ಸದನದ ಒಳಗೆ ಮತ್ತು ಹೊರಗೆ ಇದೇ ವಿಷಯ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಖರ್ಗೆ ಅವರನ್ನು  ಗುರುವಾರ ವಿಚಾರಣೆಗೊಳಡಿಸಿತ್ತು.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *