ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಸತತ ಮಳೆಯಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಮುನ್ನೆಚ್ಚರಿಕೆ ನೀಡಿದೆ.

ಜಲಾಶಯದ ಒಳಹರಿವಿನ ಪ್ರಮಾಣ 16,200 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 5000 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗ್ತಿದೆ. ಮುಂದಿನ ದಿನಗಳಲ್ಲಿ ಒಳಹರಿವಿನ ಪ್ರಮಾಣ ಆಧರಿಸಿ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದೆ.

ಕಪಿಲಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ, ಜನರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ನದಿ ಪಾತ್ರದ‌ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

  • ಜಲಾಶಯದ ಗರಿಷ್ಠ ಮಟ್ಟ -2284 ಅಡಿ
  • ಜಲಾಶಯದ ಇಂದಿನ‌ ಮಟ್ಟ -2275 ಅಡಿ
  • ಜಲಾಶಯದ ಒಳಹರಿವು -16 ಸಾವಿರ ಕ್ಯೂಸೆಕ್
  • ಜಲಾಶಯದ ಹೊರಹರಿವು -5000 ಕ್ಯೂಸೆಕ್

The post ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಪ್ರವಾಹದ ಮುನ್ನೆಚ್ಚರಿಕೆ appeared first on News First Kannada.

Source: newsfirstlive.com

Source link