ಮೈಸೂರು: ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ, ಕಬಿನಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಡ್ಯಾಂ ತುಂಬಲು ಕೇವಲ ಇನ್ನು ಮೂರೇ ಅಡಿ ಬಾಕಿ ಇದೆ. ಆದ್ದರಿಂದ ನದಿ ಪಾತ್ರದ ಜನರಲ್ಲಿ ಕೊರೊನಾ ಆತಂಕದ ನಡುವೆ ಪ್ರವಾಹ ಭೀತಿಯೂ ಶುರುವಾಗಿದೆ.

ಗುರುವಾರ ಸಂಜೆ ಕಬಿನಿ ಜಲಾಶಯಕ್ಕೆ 15,861 ಕ್ಯೂಸೆಕ್ ಒಳ ಹರಿವು ಹೆಚ್ಚಾಗಿರುವುದರಿಂದ, 13,500 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯದ ಕಾರ್ಯಪಾಲನ ಅಭಿಯಂತರ ಸಿ.ವಿ.ಸುರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಕಬಿನಿ ಭರ್ತಿಗೆ 3 ಅಡಿಯಷ್ಟೇ ಬಾಕಿ; ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ appeared first on News First Kannada.

Source: newsfirstlive.com

Source link