ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅನಾಹುತವೊಂದು ನಡೆದಿದೆ.. ಡಿವೈಡರ್​ಗೆಂದು ಹಾಕಲಾದ ಕಬ್ಬಿಣದ ಸಲಾಕೆ ತಲೆಭಾಗಕ್ಕೆ ಹೊಕ್ಕು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಸ್ಮಾರ್ಟ್ ಸಿಟಿ ಗುತ್ತಿಗೆದಾರನ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಮೊಹ್ಮದ್ ಮುಲ್ಲಾ (65) ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುತ್ತಿಗೆದಾರ ವಿರುದ್ಧ ಐಪಿಸಿ-304(A) ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿದೆ ಎಂಬ ಮಾಹಿತಿ ಇದೆ. ಗುತ್ತಿಗೆದಾರ ಮತ್ತು ಎಂಜಿನಿಯರ್ ನಿರ್ಲಕ್ಷ್ಯವೇ ಕಾರಣ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

The post ಕಬ್ಬಿಣದ ಸಲಾಕೆ ಹೊಕ್ಕು ವ್ಯಕ್ತಿ ಸಾವು; ಸ್ಮಾರ್ಟ್ ಸಿಟಿ ಗುತ್ತಿಗೆದಾರನ ವಿರುದ್ಧ ಕೇಸ್ ದಾಖಲು appeared first on News First Kannada.

Source: newsfirstlive.com

Source link