ಬೆಂಗಳೂರು: ಪ್ರತಿಮೆಗೆ ರಕ್ಷಣೆ ನೀಡಲಾಗದ ಕೇರಳದ ಕಮ್ಯುನಿಸ್ಟ್ ಸರ್ಕಾರದ ಯಡವಟ್ಟಿನಿಂದ, ಈ ಬಾರಿ ಗಣರಾಜ್ಯೋತ್ಸವದ ಪರೇಡ್ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಆಯ್ಕೆಯಾಗಿಲ್ಲ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು ಪ್ರತಿ ಗಣರಾಜ್ಯೋತ್ಸವಕ್ಕೆ ದೇಶದ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸೇರಿಸಿ ಒಟ್ಟು 12 ಸ್ತಬ್ಧ ಚಿತ್ರಗಳ ಆಯ್ಕೆ ಮಾಡಲಾಗುತ್ತದೆ. ಕೇಂದ್ರದ ಸ್ತಬ್ಧ ಚಿತ್ರದ ನಿಯಮಾವಳಿ ಹಾಗೂ ಮಾರ್ಗದರ್ಶಿಯನ್ನು ಕೇರಳ ಸರ್ಕಾರ ಸರಿಯಾಗಿ ಪಾಲಿಸದ ಕಾರಣ ಕೇರಳದ ಸ್ತಬ್ಧ ಚಿತ್ರ ಆಯ್ಕೆಯಾಗಿಲ್ಲ ಎಂದಿದ್ದಾರೆ.