ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಸಂಜೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಉಡುಪಿ‌, ಕಾರವಾರ ಮತ್ತು ಮಂಗಳೂರು ಡಿಸಿಗಳಿಗೆ ಕರೆ ಮಾಡಿ ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಮಾಹಿತಿ ಪಡೆದರು.

ಮಂಗಳೂರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಮುದ್ರದಲ್ಲಿ ಸಿಕ್ಕಿ ಹಾಕಿಕೊಂಡಿರುವ ಮೀನಿಗಾರರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತನಾಡಿದ ಸಿಎಂ, ಸಿಕ್ಕಿಹಾಕಿಕೊಂಡಿರುವ ಮೀನುಗಾರರ ರಕ್ಷಣೆಗೆ ಕೇಂದ್ರದ ಜೊತೆ ನಿಕಟ ಸಂಪರ್ಕದಲ್ಲಿ ಇರುವಂತೆ ಸೂಚನೆ ನೀಡಿದರು.

ಹೆಲಿಕಾಪ್ಟರ್ ಸೇರಿದಂತೆ ಇನ್ನಿತರ ಯಾವುದೇ ಅಗತ್ಯವಿದ್ದರೂ ಕೂಡಲೇ ವ್ಯವಸ್ಥೆ ಮಾಡಬೇಕು ಅಂತ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಬಿಎಸ್​​ವೈ ಸೂಚನೆ ನೀಡಿದರು.

The post ಕರಾವಳಿ ಡಿಸಿಗಳಿಗೆ ಸಿಎಂ ಕರೆ; ಮೀನುಗಾರರ ರಕ್ಷಣೆಗೆ ಕ್ರಮವಹಿಸುವಂತೆ ಸೂಚನೆ appeared first on News First Kannada.

Source: newsfirstlive.com

Source link