ಬಾಗಲಕೋಟೆ: ಕೊರೊನಾದ ಹೆಮ್ಮಾರಿಗೆ ಒಂದೇ ಕುಟುಂಬದ ನಾಲ್ವರು ಬಲಿಯಾದ ದಾರುಣ ಘಟನೆ ನಡೆದಿದೆ. ಬಾಗಲಕೋಟೆ ತಾಲೂಕಿನ ದೇವಿನಾಳ ಗ್ರಾಮದ ವೆಂಕಟೇಶ್ ಅನ್ನೋರ ಕುಟುಂಬದ ನಾಲ್ವರು ಸದಸ್ಯರು ಕೊರೊನಾಗೆ ಸಾವನ್ನಪ್ಪಿದ್ದಾರೆ.

ಮನೆಯಲ್ಲಿದ್ದ ನಾಲ್ವರು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ವೆಂಕಟೇಶ್ ಒಂಟಗೋಡಿ (45), ವೆಂಕಟೇಶ್ ಪತ್ನಿ ರಾಜೇಶ್ವರಿ (40), ರಾಮನಗೌಡ ಉದಪುಡಿ(74), ಲಕ್ಷ್ಮೀಬಾಯಿ (68) ಮೃತ ದುರ್ದೈವಿಗಳು.

ಮೇ 3 ರಿಂದ 15 ರ ಅವಧಿಯಲ್ಲಿ ಒಬ್ಬರ ಹಿಂದೆ ಒಬ್ಬರಂತೆ ಕೊರೊನಾ ಬಲಿ ಪಡೆದುಕೊಂಡಿದೆ. ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ನಗರದ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಅಂತಾ ವರದಿಯಾಗಿದೆ.

ಮೃತ ವೆಂಕಟೇಶ್ ದಂಪತಿ

ಇವರೆಲ್ಲ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ನೆಲೆಸಿದ್ದರು. ರಾಜೇಶ್ವರಿ ಸಾಲಹಳ್ಳಿಯಲ್ಲಿ ಶಿಕ್ಷಕಿಯಾಗಿದ್ದರು. ಅವರ ಪತಿ ವೆಂಕಟೇಶ್ ರಾಮದುರ್ಗದಲ್ಲಿ ಹಾಸ್ಟೆಲ್​ನ ಸುಪರಿಯೆಂಟೆಡ್ ಆಗಿದ್ದರು. ಹೀಗಾಗಿ ಪತ್ನಿ ಊರು ಸಾಲಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದರು. ಇನ್ನು ವೆಂಕಟೇಶ್ ಅವರ ಮಾವ ನಿವೃತ್ತ ಶಿಕ್ಷಕರಾಗಿದ್ದರು.

ರಾಜೇಶ್ವರಿಗೆ ಮೊದಲು ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಬಳಿಕ ರಾಜೇಶ್ವರಿ ತಂದೆ, ತಾಯಿ, ಪತಿ ಸೇರಿ ನಾಲ್ವರು ಕೊರೊನಾ ಚಿಕಿತ್ಸೆಗಾಗಿ ಬಾಗಲಕೋಟೆ ವಿವಿಧ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಮೇ 3 ರಂದು ರಾಜೇಶ್ವರಿ ಸಾವನ್ನಪ್ಪಿದ್ದಾರೆ. ಮೇ 5 ರಂದು ತಂದೆ ರಾಮನಗೌಡ ಮೃತಪಟ್ಟರೆ, ಮೇ 12 ರಂದು ತಾಯಿ ಲಕ್ಷ್ಮೀಬಾಯಿ ಉಸಿರು ನಿಲ್ಲಿಸಿದ್ರು. ಇಂದು ಪತಿ ವೆಂಕಟೇಶ್ ಕಣ್ಮುಚ್ಚಿದ್ದಾರೆ.

The post ಕರುಣೆ ಇಲ್ಲದ ಕೊರೋನಾ: 15 ದಿನಗಳ ಅಂತರದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ appeared first on News First Kannada.

Source: newsfirstlive.com

Source link