ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ; ಬೆಂಗಳೂರಿನಲ್ಲಿ ಮತ್ತೆ ಮುಂದುವರೆಯಲಿದೆ ವರುಣನ ಆರ್ಭಟ | More than three days of rain is expected in Karnataka


ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ; ಬೆಂಗಳೂರಿನಲ್ಲಿ ಮತ್ತೆ ಮುಂದುವರೆಯಲಿದೆ ವರುಣನ ಆರ್ಭಟ

ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಅವಾಂತರ ಸೃಷ್ಟಿಯಾಗಿದೆ. ಗಾಳಿ ಸಹಿತ ಮಳೆಗೆ (Rain) ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಬಹುದು. ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೆ ವರುಣನ ಆರ್ಭಟ ಮುಂದುವರೆಯಲಿದೆ.

ಬೃಹತ್ ಮರ ಬಿದ್ದು ಪವರ್ ಕಟ್:
ಬೆಂಗಳೂರು ನಗರದಲ್ಲಿ ಸುರಿದ ಗಾಳಿ ಸಹಿತ ಮಳೆಗೆ ವಿದ್ಯುತ್ ಲೇನ್ ಮೇಲೆ ಬೃಹತ್ ಮರ ಬಿದ್ದಿದೆ. ಪರಿಣಾಮ ನಗರದಲ್ಲಿ ಪವರ್ ಕಟ್ ಆಗಿದೆ. ಗಾಯತ್ರಿನಗರದಲ್ಲಿ ಮರ ಉರುಳಿ ಬಿದ್ದಿದ್ದು, 20ಕ್ಕೂ ಹೆಚ್ಚು ಮನೆಗಳಿಗೆ ಪವರ್ ಕಟ್ ಆಗಿದೆ. ಬೃಹತ್ ಮರ ಬಿದ್ದ ಹಿನ್ನೆಲೆ ಎರಡು ಕಾರುಗಳು ಜಖಂ ಆಗಿವೆ. ಹಾಗೇ 3 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂದು ಕಂಬ ಕಾರಿನ ಮೇಲೆ ಬಿದ್ದ ಹಿನ್ನೆಲೆ ಸಂಪೂರ್ಣ ಜಖಂ ಆಗಿದೆ. ಮತ್ತೊಂದು ಕಾರಿನ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.

4ಕ್ಕೂ ಹೆಚ್ಚು ಕಂಬ ವಾಲಿರುವ ಹಿನ್ನೆಲೆ ದುರಸ್ತಿ ಕಾರ್ಯ ನಡೆಸಿದ್ದಾರೆ. ರಾತ್ರಿಯಿಡಿ ಬೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಮಾಡಿದೆ.

ನಿನ್ನೆ ಕಸ್ತೂರಬಾ ರಸ್ತೆಯಲ್ಲಿ ಬಸ್ ನಿಲ್ದಾಣದ ಮೇಲೆ ಮರ ಬಿದ್ದು ವಾಹನಗಳು ಜಖಂವಾಗಿದೆ. ಮರ ಬಿದ್ದ ರಭಸಕ್ಕೆ ದ್ವಿಚಕ್ರ ವಾಹನ, ಬಸ್​ಗೆ ಹಾನಿ ಉಂಟಾಗಿದೆ. ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆ ಹಿನ್ನಲೆ ದ್ವಿಚಕ್ರ ವಾಹನ ಸವಾರರು ಪರದಾಡುತ್ತಿದ್ದು, ಬಸ್ ನಿಲ್ದಾಣಗಳಲ್ಲಿ ಬೈಕ್​ಗಳನ್ನು ಪಾರ್ಕ್ ಮಾಡಿ ಮಳೆ ಬೀಳದ ಕಡೆ ನಿಂತ್ತಿದ್ದಾರೆ. ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರದ ತಗ್ಗು ಪ್ರದೇಶದ ಬಹುತೇಕ ರಸ್ತೆಗಳು ಮಳೆ‌ ನೀರಿನಿಂದ ಆವೃತಗೊಂಡಿವೆ. ಜಲಾವೃತವಾಗಿ ರಸ್ತೆಗಳು ಕೆರೆಯಂತಾಗಿವೆ. ಚಾಲುಕ್ಯ ಸರ್ಕಲ್, ಶಿವಾನಂದ ವೃತ್ತ, ಓಕಳಿಪುರಂ, ಹಡ್ಸನ್ ಸರ್ಕಲ್, ಬ್ರಿಗೇಡ್ ರೋಡ್ ಜಂಕ್ಷನ್, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ ಬಳಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

TV9 Kannada


Leave a Reply

Your email address will not be published. Required fields are marked *