ಕರ್ನಾಟಕದಲ್ಲಿ ಭಾರತ್ ಜೋಡೋ: ರಾಹುಲ್​ ಗಾಂಧಿ ಯಾತ್ರೆಗೆ ಟಾಂಗ್ ನೀಡಲು ಬಿಜೆಪಿ ಪ್ಲ್ಯಾನ್ ರೆಡಿ | Karnataka BJP Ready To Plan Taunt For Rahul Gandhi Bharat Jodo Yatra


ಕರ್ನಾಟಕದಲ್ಲಿ ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಠಕ್ಕರ್ ಕೊಡಲು ಬಿಜೆಪಿ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ.

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಆರಂಭವಾಗಿರುವ ‘ಭಾರತ್ ಜೋಡೋ ಯಾತ್ರೆ’ (Bharat Jodo Yatra) ನಾಳೆ (ಸೆಪ್ಟೆಂಬರ್ 30) ಕರ್ನಾಟಕವನ್ನು ಪ್ರವೇಶಿಸಲಿದೆ. ಕೇರಳದ ವೈನಾಡು ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪುವ ಭಾರತ್ ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ, 510 ಕಿಮೀ ಕೈಪಡೆ ಪಾದಯಾತ್ರೆ ನಡೆಸಲಿದೆ. ಈ ಯಾತ್ರೆಯನ್ನು ಯಶಸ್ವಿಗೊಳಿಸಲು ಕರ್ನಾಟಕ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದೆಡೆ, ರಾಹುಲ್​ ಗಾಂಧಿ ಯಾತ್ರೆಗೆ ಟಾಂಗ್ ನೀಡಲು ಕರ್ನಾಟಕ ಬಿಜೆಪಿ ಪ್ಲ್ಯಾನ್ ಮಾಡಿದೆ.
​​
ಹೌದು….ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಕರ್ನಾಟಕ ಪ್ರವಾದ ವೇಳೆ 40 ಪರ್ಸೆಂಟೇಜ್ ಕಮಿಷನ್, ಅಚ್ಚೇದಿನ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಈ ಮೂಲಕ ಮೋದಿ ಸ್ವಾಗತಕ್ಕೆ ಟಾಂಗ್ ಕೊಟ್ಟಿತ್ತು. ಇದೀಗ ಬಿಜೆಪಿ ಸಹ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಭಾರತ್ ಜೊಡೋ ಯಾತ್ರೆಗೆ ಠಕ್ಕರ್ ಕೊಡಲು ತಂತ್ರ ಹೆಣೆದಿದೆ.

TV9 Kannada


Leave a Reply

Your email address will not be published.