ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಇಂದು ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ ಸುಧಾಕರ್ ಸಭೆ | K Sudhakar will meet with the Advisory Committee today for corona case increase


ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಇಂದು ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ ಸುಧಾಕರ್ ಸಭೆ

ಡಾ.ಕೆ. ಸುಧಾಕರ್

ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ಕೊವಿಡ್ ಪ್ರಕರಣಗಳು ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿವೆ. 10 ದಿನಗಳ ಹಿಂದೆ ಶೇ 1.1ರಷ್ಟಿದ್ದ ಪಾಸಿಟಿವಿಟಿ ಪ್ರಮಾಣ ಇದೀಗ ಶೇ 2.9ಕ್ಕೆ ಹೆಚ್ಚಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣಲ್ಲಿದ್ದ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಸದ್ಯ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (Dr K Sudhakar) ಇಂದು (ಜೂನ್ 13) ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸುತ್ತಾರೆ. ಮಧ್ಯಾಹ್ನ 3 ಗಂಟೆ ಹೊತ್ತಿಗೆ ಆರೋಗ್ಯಸೌಧದಲ್ಲಿ ಸಚಿವ ಸುಧಾಕರ್ ಸಭೆ ನಡೆಸಿ, ಮುಂದಿನ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಾದ ಕಾರಣ ಸಭೆ ನಡೆಯಲಿದೆ.

ಬೆಂಗಳೂರಿನಲ್ಲಿ ಮೂರು ಪಟ್ಟು ಕೊರೊನಾ ಹೆಚ್ಚಳ:
ನಗರದಲ್ಲಿ ಕಳೆದ 10 ದಿನಗಳಲ್ಲಿ ಕೊವಿಡ್ ಪ್ರಕರಣಗಳು ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿವೆ. 10 ದಿನಗಳ ಹಿಂದೆ ಶೇ 1.1ರಷ್ಟಿದ್ದ ಪಾಸಿಟಿವಿಟಿ ಪ್ರಮಾಣ ಇದೀಗ ಶೇ 2.9ಕ್ಕೆ ಹೆಚ್ಚಾಗಿದೆ. ಬಿಬಿಎಂಪಿ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಮೇ 31ರಂದು 178 ಪ್ರಕರಣಗಳು ವರದಿಯಾಗಿದ್ದರೆ, ಜೂನ್ 10ರಂದು ವರದಿಯಾಗಿರುವ ಪ್ರಕರಣಗಳ ಸಂಖ್ಯೆ 494 ದಾಟಿದೆ. ನಗರದ 10 ವಾರ್ಡ್ಗಳಲ್ಲಿ ಪಾಸಿಟಿವಿಟಿ ಪ್ರಮಾಣವೂ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ. ಈ ಪೈಕಿ 8 ವಾರ್ಡ್ಗಳು ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಇರುವುದು ಗಮನಾರ್ಹ ಅಂಶ. ಇತರ ಎರಡು ವಾರ್ಡ್ಗಳು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿವೆ.

TV9 Kannada


Leave a Reply

Your email address will not be published.