ಕರ್ನಾಟಕದ 176 ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳ; ಸರ್ಕಾರದ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಿ | Arogya Mela Karnataka Health Department Health Services by Karnataka Govt Health Checkup Facilities


ಕರ್ನಾಟಕದ 176 ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳ; ಸರ್ಕಾರದ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಿ

ಆರೋಗ್ಯ ಮೇಳ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ 176 ತಾಲ್ಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬ ನಾಗರಿಕರು ಈ ಮೇಳಗಳಿಗೆ ಭೇಟಿ ನೀಡಲು ತಿಳಿಸಲಾಗಿದೆ. ಸರ್ಕಾರ ಒದಗಿಸುತ್ತಿರುವ ಎಲ್ಲಾ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಲು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಆಯುಕ್ತರು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ. ಈ ಕಾರ್ಯಕ್ರಮದ ವಿವರನ್ನು ಸಹ ನೀಡಲಾಗಿದೆ. ಅದರಂತೆ, ಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ, ಡಿಜಿಟಲ್ ಆರೋಗ್ಯ ಗುರುತಿನ ಐಡಿ ಕಾರ್ಡ್, ಸೂಪರ್ ಸ್ಪೆಷಾಲಿಟಿ ಸೇವೆಗೆ ಉಚಿತ ವಿಶೇಷ ಆರೈಕೆ ಮತ್ತು ಟೆಲಿ ಮೆಡಿಸಿನ್ ಸಮಾಲೋಚನೆ, ಅಸಂಕ್ರಾಮಿಕ ರೋಗಗಳ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ, ಅಸಾಂಕ್ರಾಮಿಕ ರೋಗಗಳು ಮತ್ತು ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ, ಆಯುಷ್ಯ ಆರೈಕೆ ಮತ್ತು ಯೋಗ ಶಿಬಿರ ಇರಲಿದೆ ಎಂದು ತಿಳಿಸಲಾಗಿದೆ.

ಆರೋಗ್ಯ ಮೇಳದಲ್ಲಿ ಏನೇನು ಇರಲಿದೆ?

  • ಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ
  • ಡಿಜಿಟಲ್ ಆರೋಗ್ಯ ಗುರುತಿನ ಐಡಿ ಕಾರ್ಡ್
  • ಸೂಪರ್ ಸ್ಪೆಷಾಲಿಟಿ ಸೇವೆಗೆ ಉಚಿತ ವಿಶೇಷ ಆರೈಕೆ ಮತ್ತು ಟೆಲಿ ಮೆಡಿಸಿನ್ ಸಮಾಲೋಚನೆ
  • ಅಸಂಕ್ರಾಮಿಕ ರೋಗಗಳ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ
  • ಅಸಾಂಕ್ರಾಮಿಕ ರೋಗಗಳು ಮತ್ತು ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ
  • ಆಯುಷ್ಯ ಆರೈಕೆ ಮತ್ತು ಯೋಗ ಶಿಬಿರ ಇರಲಿದೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ ನಾಲ್ಕನೆ ವರ್ಷಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಆರೋಗ್ಯ ಮೇಳವನ್ನು ಆಯೋಜಿಸಿದೆ. ಮೇಳದಲ್ಲಿ ಸಾರ್ವಜನಿಕರು ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ, ಚಿಕಿತ್ಸೆ ಮಾರ್ಗದರ್ಶನವನ್ನು ಉಚಿತವಾಗಿ ಪಡೆಯಬಹುದು ಎಂದು ತಿಳಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ತಾಲೂಕು ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಉಚಿತ ಆರೋಗ್ಯ ಮೇಳ ಆಯೋಜಿಸಿದೆ.

TV9 Kannada


Leave a Reply

Your email address will not be published. Required fields are marked *