
ಕರ್ನಾಟಕ ವಿಶ್ವವಿದ್ಯಾಲಯ
ಕರ್ನಾಟಕ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕಿ ನೇಮಕಾತಿ ವಿವಾದ ವಿಚಾರ ಸಂಬಂಧ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ನೇಮಕಾತಿ ರದ್ಧತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ (Karnataka University) ಸಹಾಯಕ ಪ್ರಾಧ್ಯಾಪಕಿ (Assistant professor) ನೇಮಕಾತಿ ವಿವಾದ (Controversy) ವಿಚಾರ ಸಂಬಂಧ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ನೇಮಕಾತಿ (Recruitment) ರದ್ಧತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನೇಮಕಾತಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಶ್ರೀದೇವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ತಡೆ ಆದೇಶ ನೀಡಿದೆ.
ಪಿಎಚ್ಡಿಯಲ್ಲಿ ಕೋರ್ಸ್ ವರ್ಕ್ ಮಾಡಿಲ್ಲದ ಕಾರಣ ನೇಮಕಾತಿ ಪ್ರಶ್ನಿಸಿ ಮಂಜುನಾಥ್ ಅವರು ಧಾರವಾಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ನೇಮಕಾತಿಯನ್ನು ಏಪ್ರಿಲ್ 11ರಂದು ರದ್ದುಗೊಳಿಸಿ ಆದೇಶಿಸಿತ್ತು. ಹೈಕೋರ್ಟ್ ಆದೇಶದ ಅನ್ವಯ ಕರ್ನಾಟಕ ವಿಶ್ವವಿದ್ಯಾಲಯ ಶ್ರಿದೇವಿ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀದೇವಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಶ್ರೀದೇವಿ ಸಲ್ಲಿಸಿದ ಮೇಲ್ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ನೇಮಕಾತಿ ರದ್ಧತಿ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿತು.