ಹೈಕೋರ್ಟ್ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಇಂದು (ಆಗಸ್ಟ್ 12) ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್
ಬೆಂಗಳೂರು: ಹೈಕೋರ್ಟ್ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಇಂದು (ಆಗಸ್ಟ್ 12) ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿ ಅನಿಲ್ ಭೀಮಸೇನ್ ಕಟ್ಟಿ, ನ್ಯಾಯಮೂರ್ತಿ ಗುರುಸಿದ್ದಯ್ಯ ಬಸವರಾಜ, ನ್ಯಾಯಮೂರ್ತಿ ಚಂದ್ರಶೇಖರ್ ಮೃತ್ಯುಂಜಯ ಜೋಶಿ ಮತ್ತು ನ್ಯಾಯಮೂರ್ತಿ ಉಮೇಶ್ ಮಂಜುನಾಥ್ ಭಟ್ ಅಡಿಗ ಮತ್ತು ನ್ಯಾಯಮೂರ್ತಿ ತಲಕಾಡ್ ಗಿರಿಗೌಡ ಶಿವಶಂಕರೇಗೌಡ ಅವರನ್ನು ನೇಮಕ ಮಾಡಲಾಗಿದೆ.
ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಹಾಲಿ ಹಿರಿಯ ಜಿಲ್ಲಾ ನ್ಯಾಯಾಧೀಶರಾಗಿದ್ದವರಿಗೆ ಪದೋನ್ನತಿ ದೊರೆತಿದೆ.