ಕಲಬುರಗಿ: ಜಿಲ್ಲೆಯ ಹಲವಡೆ ರಾತ್ರಿ ಭಾರೀ ಮಳೆ ಸುರಿದಿದೆ. ಧಾರಾಕಾರ ಮಳೆಗೆ ಮನೆಯೊಂದರ ಗೋಡೆ ಕುಸಿದುಬಿದ್ದು, ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಜೇವರ್ಗಿ ತಾಲ್ಲೂಕಿನ ಬಳೂಂಡಗಿ ಗ್ರಾಮದಲ್ಲಿ ನಡೆದಿದೆ.

ನೀಲಮ್ಮ ತಳವಾರ (7) ಮೃತ ಬಾಲಕಿ. ಕಳೆದ ರಾತ್ರಿ ಒಂದು ಗಂಟೆ ಸಮಯದಲ್ಲಿ ಅವಘಡ ಸಂಭವಿಸಿದೆ. ಹೆತ್ತವರ ಜೊತೆ ಮನೆಯಲ್ಲಿ ಮಲಗಿದ್ದ ಬಾಲಕಿ ಮೇಲೆ ಗೋಡೆಯ ಅವಶೇಷಗಳು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆಯ ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

The post ಕಲಬುರಗಿಯಲ್ಲಿ ಭಾರೀ ಮಳೆ: ಮನೆ ಗೋಡೆ ಬಿದ್ದು 7 ವರ್ಷದ ಬಾಲಕಿ ದುರ್ಮರಣ appeared first on News First Kannada.

Source: newsfirstlive.com

Source link