ಕಲಬುರಗಿ: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ಈರ್ವರ ಬಂಧನ | 27 Buffallos rescued in Ganagapura at Kalburgi


ಕಲಬುರಗಿ: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ಈರ್ವರ ಬಂಧನ

ಎಮ್ಮೆಗಳನ್ನು ಗಾಡಿಯಲ್ಲಿ ಸಾಗಿಸುತ್ತಿದ್ದ ದೃಶ್ಯ

ಕಲಬುರಗಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ಎಮ್ಮೆ ಸಾಗಾಟ ಮಾಡುತ್ತಿದ್ದ ಈರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಪ್ರಕರಣ ನಡೆದಿದ್ದು, ಠಾಣೆಯ ಪೊಲೀಸರು  ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿದ 27 ಎಮ್ಮೆಗಳನ್ನು ಗೋಶಾಲೆಗೆ ರವಾನಿಸಲಾಗಿದೆ. ಎಮ್ಮೆಗಳ ಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆಯನ್ನು ಸುತ್ತಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಉಮರ್ ಅಲಿ, ಅಬ್ದುಲ್ ರಜಾಕ್​ರನ್ನು ವಶಕ್ಕೆ ಪಡೆಯಲಾಗಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರ: ಶಹಬಜಾರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಕಲಬುರಗಿ: ಎರಡು ಸಮುದಾಯಗಳ ಮಧ್ಯೆ ಘರ್ಷಣೆ ಹಿನ್ನೆಲೆಯಲ್ಲಿ ನಗರದ ಶಹಬಜಾರ್ ಸುತ್ತಮುತ್ತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜನವರಿ 22ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಕಲಬುರಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಶಹಬಜಾರ್ ನಾಕಾದಲ್ಲಿ ಮೂರ್ತಿ ಸ್ಥಾಪನೆ ವಿಚಾರವಾಗಿ ಘರ್ಷಣೆ ನಡೆದಿತ್ತು. ಎರಡು ಸಮುದಾಯಗಳ ನಡುವೆ ಘರ್ಷಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಹೊರಸಡಿಸಲಾಗಿದೆ.

ಕಲಬುರಗಿ: ಚೆನ್ನೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ 14 ವಿದ್ಯಾರ್ಥಿಗಳಿಗೆ ಕೊರೊನಾ
ಜಿಲ್ಲೆಯ ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದ ಬಳಿಯಿರುವ ಆದರ್ಶ ವಿದ್ಯಾಲಯದ 14 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಹೋಮ್ ಐಸೋಲೇಷನ್ ಮಾಡಲಾಗಿದೆ. ಕಲಬುರಗಿಯಲ್ಲಿ ಈಗಾಘಲೇ ಹಲವು ಶಾಲೆಗಳಲ್ಲಿ ಕೊರೊನಾ ಪತ್ತೆಯಾಗಿದೆ. ಆದರ್ಶ ವಿದ್ಯಾಲಯದಲ್ಲಿ 1 ರಿಂದ 10 ನೇ ತರಗತಿಯವರೆಗೆ ಶಾಲೆ ಇದೆ. ಪ್ರಸ್ತುತ ಹಲವರಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಉಳಿದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

TV9 Kannada


Leave a Reply

Your email address will not be published. Required fields are marked *