ಕೊಪ್ಪಳ: ವಿದ್ಯಾರ್ಥಿಗಳಿಗೆ ಕಲಿಕಾ ಕೊಠಡಿಗಳನ್ನು ನೀಡಿ ಕನ್ನಡ ಶಾಲೆಗಳನ್ನು ಉಳಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಗೆ ಪಾಲಕರು ಮತ್ತು ವಿದ್ಯಾರ್ಥಿಗಳು ಘೇರಾವ್ ಹಾಕಿದ್ದಾರೆ.
ಕೊಪ್ಪಳದ ಸರ್ಕಾರಿ ಶಾಸಕರ ಮಾದರಿ ಶಾಲೆ ಉಳಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪಾಲಕರು ವಿದ್ಯಾರ್ಥಿಗಳಿಗೆ ಕೊಠಡಿಗಳನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು ಕೊಠಡಿಗಳ ಅಭಾವವಿದೆ. ಆದ್ದರಿಂದ ಈ ಹಿಂದೆ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ನೀಡಿದ ಕೊಠಡಿಗಳನ್ನು ನೀಡುವಂತೆ ಪಾಲಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಸದ್ಯ ಕೇಂದ್ರಿಯ ವಿದ್ಯಾಲಯವು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು ಆ ಕೊಠಡಿಗಳನ್ನು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ಗೆ ನೀಡಲಾಗಿದೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಪಾಲಕರ ಜೊತೆಗೂಡಿ ಸಚಿವರಿಗೆ ಘೇರಾವ್ ಹಾಕಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.