ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಕಲಬರುಗಿಯಲ್ಲಿ ಮುಖ್ಯಮಂತ್ರಿಗಳಿಗೆ ತಳವಾರ ಸಮುದಾಯದ ಯುವಕರಿಂದ ಕಪ್ಪುಬಾವುಟ ಪ್ರದರ್ಶನ | Members of Talwar community display black flags to CM Basavaraj Bommai in Kalaburagiಈ ಸಂದರ್ಭದಲ್ಲಿ ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದರು.

TV9kannada Web Team


| Edited By: Arun Belly

Sep 17, 2022 | 11:44 AM
ಕಲಬುರಗಿ: ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು (Hyderabad-Karnataka Liberation Day) ಈಗ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಅಂತ ಕರೆಯಲಾಗುತ್ತಿದೆ. ಕಲಬುರಗಿಯಲ್ಲಿ (Kalaburagi) ಶನಿವಾರ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ತಿಮ್ಮಾಪುರಿ ಸರ್ಕಲ್ ನಲ್ಲಿರುವ ಹೈದರಾಬಾದ್-ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ್ ವಲ್ಲಭ್ ಭಾಯಿ ಪಟೇಲ್ (Sardar Vallabhbhai Patel) ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದರು.

TV9 Kannada


Leave a Reply

Your email address will not be published.