ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 4,03,738 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು,  4,092 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸದ್ಯ 37,36,648 ಸಕ್ರಿಯ ಪ್ರಕರಣಗಳಿವೆ.

3,86,444 ಮಂದಿ ನಿನ್ನೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟಾರೆ ವರದಿಯಾದ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. ಹಾಗೇ ಇಲ್ಲಿವರೆಗೆ 1,83,17,404 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,42,362 ಮಂದಿ ಈವರೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ದೇಶದಾದ್ಯಂತ ಈವರೆಗೆ ಒಟ್ಟು 16,94,39,663 ಜನರಿಗೆ ಲಸಿಕೆ ನೀಡಲಾಗಿದೆ.

ಕೊರೊನಾ ಪ್ರಕರಣಗಳ ಅಂಕಿ-ಅಂಶ

  • ಒಟ್ಟು ಪ್ರಕರಣಗಳು: 2,22,96,414
  • ಒಟ್ಟು ಗುಣಮುಖರಾದವರು:1,83,17,404
  • ಈವರೆಗೆ ಸಾವನ್ನಪ್ಪಿದವರ ಸಂಖ್ಯೆ: 2,42,362
  • ಈವರೆಗಿನ ವ್ಯಾಕ್ಸಿನೇಷನ್: 16,94,39,663

ನ್ಯೂಸ್​ಫಸ್ಟ್​ ಕಳಕಳಿ
ಕೊರೊನಾದಿಂದ ರಕ್ಷಿಸಿಕೊಳ್ಳಲು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಮಾಸ್ಕ್ ಧರಿಸಿ, ಸೋಶಿಯಲ್ ಡಿಸ್ಟನ್ಸ್ ಕಾಪಾಡಿ. ಕೈ ತೊಳೆಯುತ್ತಿರಿ. ಮತ್ತು ಮೇ 1 ರಿಂದ 18ರ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಅರ್ಹರಾಗಿದ್ದು ರೆಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ https://www.cowin.gov.in/ ಇಲ್ಲಿಗೆ ಭೇಟಿ ಕೊಟ್ಟು ನೊಂದಣಿ ಮಾಡಿಕೊಳ್ಳಿ. ಮತ್ತೊಂದು ಮುಖ್ಯ ಸಂಗತಿ ಗಮನಿಸಿ CoWin ಆ್ಯಪ್ ಸಾರ್ವಜನಿಕರಿಗೆ ಅಲ್ಲ. ಹೀಗಾಗಿ ಕಡ್ಡಾಯವಾಗಿ ವೆಬ್​ಸೈಟ್​ನಲ್ಲಿಯೇ ನೊಂದಾಯಿಸಿಕೊಳ್ಳಬೇಕು. 

 

The post ಕಳೆದ 24 ಗಂಟೆಗಳಲ್ಲಿ 4,03,738 ಜನರಿಗೆ ಕೊರೊನಾ.. 3,86,444 ಮಂದಿ ಗುಣಮುಖ appeared first on News First Kannada.

Source: newsfirstlive.com

Source link