ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಮಠಗಳಲ್ಲಿ ಒಂದಾದ ತೀರ್ಥಹಳ್ಳಿ ತಾಲೂಕಿನ ಕವಲೆ ದುರ್ಗ ಮಠದ ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಶ್ರೀಗಳಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಉಸಿರಾಟದ ಸಮಸ್ಯೆ ಉಂಟಾದ ಕಾರಣ ಶಿವಮೊಗ್ಗದ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಲಿಂಗೈಕ್ಯರಾಗಿದ್ದಾರೆ. ಅಪಾರ ಭಕ್ತರನ್ನು ಹೊಂದಿದ ಸ್ವಾಮೀಜಿ ನಿಧನಕ್ಕೆ ಗಣ್ಯರು‌ ಸಂತಾಪ ವ್ಯಕ್ತಪಡಿಸಿದ್ದಾರೆ.

The post ಕವಲೆ ದುರ್ಗ ಮಠದ ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಲಿಂಗೈಕ್ಯ appeared first on News First Kannada.

Source: newsfirstlive.com

Source link