ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ D.K. ಶಿವಕುಮಾರ್ ಹೇಳಿಕೆ ನೀಡಿ..ಸುರ್ಜೇವಾಲಾ ಅವರು ಕೋವಿಡ್ ಸಮಯದಲ್ಲಿ ಯಾವ ರೀತಿ ಜವಬ್ದಾರಿ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದಿದ್ದಾರೆ.

ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು.. ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು. ಕಾಂಗ್ರೆಸ್ ಪಕ್ಷ ನಿಭಾಯಿಬೇಕಾದ ಜವಾಬ್ದಾರಿ ಬಗ್ಗೆ ಸಲಹೆ ನೀಡಿದ್ದಾರೆ. 51 ನಾಯಕರು ಸಲಹೆ ನೀಡಿದ್ದಾರೆ. ಕಾಂಗ್ರೆಸ್​ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಡ್ರಗ್, ಔಷಧಿ ಸರಬರಾಜು ಮಾಡಲು ಆಗುತ್ತಿಲ್ಲ. ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ.

ಏಕಾಏಕಿಯಾಗಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಆರ್ಥಿಕ ಪ್ಯಾಕೇಜ್ ನೀಡಬೇಕು.. ಪ್ಯಾಕೇಜ್ ಕೊಡುವಂತೆ ಒತ್ತಾಯ ಮಾಡ್ತೇವೆ. ಯಾವ ರೀತಿ ಒತ್ತಾಯ ಮಾಡಬೇಕು ಎಂದು ಚರ್ಚೆ ಮಾಡ್ತೇವೆ ಎಂದರು.
ಅಕ್ಕಿ ಪ್ರಮಾಣ ಕಡಿತ ವಿಚಾರಕ್ಕೆ ಪ್ರತಿಕ್ರಿಯಿಸಿ.. ಸರ್ಕಾರಕ್ಕೆ ನಾಚಿಕೆ ಆಗಬೇಕು. ಎರಡು KG ಅಕ್ಕಿ ಕೊಡುತ್ತಿದ್ದಾರೆ. ಈ ಹಿಂದೆ 7 KG ಅಕ್ಕಿ ಕೊಡುತ್ತಿದ್ದರು..ಅದನ್ನು 2 KG ಮಾಡಿದ್ದಾರೆ. ಇವರ ಕೈಯಿಂದ ಕೊಡುತ್ತಿದ್ದಾರಾ..? ಇದಕ್ಕಿಂತ ದುರಂತ ‌ಮತ್ತೊಂದಿಲ್ಲ ಎಂದು ಸರ್ಕಾರದ ನಡೆಗೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

The post ಕಾಂಗ್ರೆಸ್​ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ಮಾಡ್ತೇವೆ- ಡಿ.ಕೆ. ಶಿವಕುಮಾರ್ appeared first on News First Kannada.

Source: newsfirstlive.com

Source link