ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಜನವರಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಜೆಡಿಎಸ್ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿಗೂ ನಾವು ಹೋಗುತ್ತೇವೆ. ಪಂಚರತ್ನ ಯೋಜನೆ ಜೊತೆ ಜನರ ಮುಂದೆ ಹೋಗುತ್ತೇವೆ. ಪಕ್ಷದ ಕಚೇರಿಯಲ್ಲಿ ಹೆಚ್ಚು ಕಾರ್ಯಕ್ರಮ ಇರುವುದಿಲ್ಲ. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದೆವು. ಹೀಗಾಗಿ ಎಲ್ಲ ಮಾಹಿತಿ ಪಡೆದು ಗೆಲುವಿಗೆ ಪ್ರಯತ್ನಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು (ನವೆಂಬರ್ 17) ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರನ್ನ ಸಂಪರ್ಕಿಸಿದ್ದಾರೆ. 10 ಬಾರಿ ಸಂಪರ್ಕ ಮಾಡಿ ಕಾಂಗ್ರೆಸ್ಗೆ ಬರಲು ಹೇಳಿದ್ದಾರೆ ಎಂದು ಬೆಂಗಳೂರಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಮ್ಮ ಶಾಸಕರು ನನಗೆ ಕರೆ ಮಾಡಿ ಎಲ್ಲವನ್ನೂ ತಿಳಿಸಿದ್ದಾರೆ. ಜೆಡಿಎಸ್ ಮುಗಿದುಹೋಯ್ತು, ಭವಿಷ್ಯ ಇಲ್ಲವೆಂದು ಹೇಳಿದ್ದಾರೆ. ಈ ರೀತಿ ಹೇಳಿ ಜೆಡಿಎಸ್ ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಅವರು ಯಾವ ಪ್ರಯತ್ನ ಮಾಡಿದರೂ ಪ್ರಯೋಜನವಾಗಲ್ಲ. ನಮ್ಮ ಶಾಸಕರ ಬ್ರೈನ್ ವಾಶ್ ಮಾಡುವ ಕೆಲಸ ಮಾಡ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಶಾಸಕರನ್ನ ಸೆಳೆಯುವ ಕೆಲಸ ಆಗುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ. ಹೋಗುವವರು ಎಲ್ಲಿ ಭವಿಷ್ಯವಿದೆ ಅಲ್ಲಿಗೆ ಹೋಗಬಹುದು. ನಮ್ಮಲ್ಲಿ ಬೆಳೆದು ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಬೇಡ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಬಿಟ್ಕಾಯಿನ್ ಪ್ರಕರಣ ತನಿಖೆ ಬಗ್ಗೆ ಪ್ರಧಾನಿ ಮೋದಿ ಮೇಲೆ ನಂಬಿಕೆ ಇಡೋಣ: ಹೆಚ್ಡಿ ಕುಮಾರಸ್ವಾಮಿ