ಕಾಂಗ್ರೆಸ್​-ಬಿಜೆಪಿ ಕಿತ್ತಾಟ: ‘ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ’ -ನಿಖಿಲ್

ಬೆಂಗಳೂರು: ಜೂ. 28 ರಂದು ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್​ ಹೋರಾಟ ನಡೆಸಲಿದೆ. ಈ ಹಿನ್ನೆಲೆ ಇಂದು ಜೆ.ಪಿ ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಇ. ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಭೆ ಬಳಿಕ ಮಾತನಾಡಿದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಲಿದೆ. ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೊರೊನಾ ಸಮಯದಲ್ಲಿ ಜನರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಹೊರೆ ಹೊರಿಸಲಾಗಿದೆ ಎಂದರು.  ಸೋಮವಾರ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದು ನಿಖಿಲ್ ತಿಳಿಸಿದ್ರು.

ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ
ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಕಿತ್ತಾಟ ಆರಂಭವಾಗಿದೆ. ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ. ಇದು ಚರ್ಚೆ ಮಾಡುವ ಸಂದರ್ಭವೇ ಅಲ್ಲ. ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ ಎಂದು ಇದೇ ವೇಳೆ ನಿಖಿಲ್ ಸ್ಪಷ್ಟಪಡಿಸಿದ್ರು. ರಾಜ್ಯಕ್ಕೆ ಜೆಡಿಎಸ್ ಕೊಡುಗೆ ಅಪಾರವಾಗಿದೆ. ಮುಂದಿನ ದಿನಗಳಲ್ಲಿ ಇದನ್ನ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ. ನಾವು ಕ್ವಾರಂಟೇನ್​​ನಲ್ಲಿ ಇಲ್ಲ. ಬೀದಿಗಿಳಿದು ಹೋರಾಟ ನಡೆಸುತ್ತಿದ್ದೇವೆ ಎಂದರು.

ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ಪಾದಯಾತ್ರೆ
ಇದೇ ವೇಳೆ ಮಾತನಾಡಿದ ಹೆಚ್.ಕೆ ಕುಮಾರಸ್ವಾಮಿ, ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿವೆ. ದಿನೇ ದಿನೇ ತೈಲ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇದರ ವಿರುದ್ಧ ನಮ್ಮ ಪಕ್ಷವು ಹೋರಾಟ ನಡೆಸಲಿದೆ ಎಂದರು. ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಬೆಳಗ್ಗೆ 11 ಗಂಟೆಗೆ ಜೆಪಿ ಭವನದಿಂದ ಮೌರ್ಯವೃತ್ತದ ಗಾಂಧಿ ಪ್ರತಿಮೆವರೆಗೂ ಪಾದಯಾತ್ರೆ ನಡೆಸುತ್ತೇವೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

The post ಕಾಂಗ್ರೆಸ್​-ಬಿಜೆಪಿ ಕಿತ್ತಾಟ: ‘ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ’ -ನಿಖಿಲ್ appeared first on News First Kannada.

Source: newsfirstlive.com

Source link