ಕಾಂಗ್ರೆಸ್‌ ಪಾದಯಾತ್ರೆಗೆ ಹೈಕೋರ್ಟ್‌ ಕೆಂಡಾಮಂಡಲ, ಪಾದ ಯಾತ್ರೆ ತಡೆಯಲು ಸರ್ಕಾರ ಅಸಮರ್ಥವಾಗಿದೆಯೇ ಎಂದು ಪ್ರಶ್ನೆ | Karnataka high court angry at state government not taking action against congress sponsored mekedatu padayatre


ಕಾಂಗ್ರೆಸ್‌ ಪಾದಯಾತ್ರೆಗೆ ಹೈಕೋರ್ಟ್‌ ಕೆಂಡಾಮಂಡಲ, ಪಾದ ಯಾತ್ರೆ ತಡೆಯಲು ಸರ್ಕಾರ ಅಸಮರ್ಥವಾಗಿದೆಯೇ ಎಂದು ಪ್ರಶ್ನೆ

ಹೈಕೋರ್ಟ್

ಬೆಂಗಳೂರು: ಕೊರೊನಾ ಮಹಾಮಾರಿ ಮಧ್ಯೆ ಅತ್ತ ಕಾಂಗ್ರೆಸ್​ ಪ್ರಾಯೋಜಕತ್ವದ ಮೇಕೆದಾಟು ಪಾದಯಾತ್ರೆ ನಾಲ್ಕನೆಯ ದಿನಕ್ಕೆ ಪ್ರವೇಶವಾಗಿರುವ ಸಂದರ್ಭದಲ್ಲಿ ಪಾದಯಾತ್ರೆ ವಿರುದ್ಧ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆಯಾಗಿದೆ. ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಎಂಬುವವರು ಇಂದು ಮನವಿ ಮಾಡಿದ್ದರು. ಕೆಪಿಸಿಸಿ ಪಾದಯಾತ್ರೆಯಿಂದ ಕೊವಿಡ್ ಹಬ್ಬಲಿದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನು ಭೇಟಿ ಮಾಡಿದ್ದಾರೆ . ಪಾದಯಾತ್ರೆ ಸೂಪರ್ ಸ್ಪ್ರೆಡರ್ ಆಗುವ ಭೀತಿ ಇದೆ. ಹೀಗಾಗಿ ಪಿಐಎಲ್ ತುರ್ತು ವಿಚಾರಣೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದರು. ಪಿಐಎಲ್ ವಿಚಾರಣೆಯನ್ನು ತುರ್ತಾಗಿಯೇ ಕೈಗೆತ್ತಿಕೊಂಡ ಹೈಕೋರ್ಟ್​ ಕಾಂಗ್ರೆಸ್‌ ಪಾದಯಾತ್ರೆ ಬಗ್ಗೆ ಕೆಂಡಾಮಂಡಲಗೊಂಡಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ ಎಂದೂ ಪ್ರಶ್ನೆ ಮಾಡಿದೆ. ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್‌ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ.

TV9 Kannada


Leave a Reply

Your email address will not be published. Required fields are marked *