ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ 21ರಿಂದ ಚುನಾವಣೆ: ಮೌನ ಪಾಲಿಸಿದ ರಾಹುಲ್ ಗಾಂಧಿ | Election For Congress Chief From Aug 21 Rahul Gandhi not revealed whether he would contest for the post


ಗಾಂಧಿ ಕುಟುಂಬದಿಂದ ಅಲ್ಲದೆ ಹೊರಗಿನ ನಾಯಕರನ್ನು ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡುವ ಸಾಧ್ಯತೆಯ ಬಗ್ಗೆ ಪಕ್ಷವು ಬಹಳ ಸಮಯದಿಂದ ಚರ್ಚಿಸುತ್ತಿದೆ. ಈ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಆಗಸ್ಟ್  21ರಿಂದ ಚುನಾವಣೆ: ಮೌನ ಪಾಲಿಸಿದ ರಾಹುಲ್ ಗಾಂಧಿ

ಪ್ರಿಯಾಂಕಾ ಗಾಂಧಿ- ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ಅಧ್ಯಕ್ಷರ (Congress Chief) ಆಯ್ಕೆಗೆ ಆಗಸ್ಟ್ 21 ರಿಂದ ಚುನಾವಣೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಸೋನಿಯಾ ಗಾಂಧಿ (Sonia Gandhi) ನೇತೃತ್ವದ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಸ್ಪರ್ಧಿಸುವ ಬಗ್ಗೆ ಬಹಿರಂಗಪಡಿಸಿಲ್ಲ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಹುಲ್ ಗಾಂಧಿ ಮತ್ತೊಮ್ಮೆ ಪಕ್ಷದ ಮುಖ್ಯಸ್ಥರಾಗಲು ಕಾಂಗ್ರೆಸ್ ನಾಯಕರು ಮಾಡಿದ ಮನವಿಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬದಿಂದ ಅಲ್ಲದೆ ಹೊರಗಿನ ನಾಯಕರನ್ನು ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡುವ ಸಾಧ್ಯತೆಯ ಬಗ್ಗೆ ಪಕ್ಷವು ಬಹಳ ಸಮಯದಿಂದ ಚರ್ಚಿಸುತ್ತಿದೆ. ಈ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲ ಎಂದು ಮೂಲಗಳು ತಿಳಿಸಿವೆ.ಗುಂಪುಗಾರಿಕೆಯಿಂದ ಕೂಡಿರುವ ಪಕ್ಷವನ್ನು ಒಗ್ಗೂಡಿಸುವ ತಾಕತ್ತು ಗಾಂಧಿ ಕುಟುಂಬಕ್ಕೆ ಇದೆ ಎಂದು ಕಾಂಗ್ರೆಸ್ ನಾಯಕರ ದೊಡ್ಡ ವಿಭಾಗವು ಗಾಂಧಿ ಕುಟುಂಬದವರೇ ನಾಯಕತ್ವ ವಹಿಸಬೇಕು ಎಂದು ಬಯಸುತ್ತಿದ್ದಾರೆ.

ಮಾರ್ಚ್‌ನಲ್ಲಿ ಪಕ್ಷದ ಅಸೆಂಬ್ಲಿ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಹಿರಿಯ ನಾಯಕರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ಸೋನಿಯಾ ಗಾಂಧಿ ಅವರು ರಾಜೀನಾಮೆ ಪ್ರಸ್ತಾಪವನ್ನು “ಪಕ್ಷದ ಹಿತಾಸಕ್ತಿಗಾಗಿ ಅಂತಿಮ ತ್ಯಾಗ” ಎಂದು ಮುಂದಿಟ್ಟಿದ್ದರು  ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

2017 ರಲ್ಲಿ ತನ್ನ ತಾಯಿಯಿಂದ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ರಾಹುಲ್ ಗಾಂಧಿ, 2019 ರ ಮೇ ತಿಂಗಳಲ್ಲಿ 543 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗಳಿಸಿದ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

TV9 Kannada


Leave a Reply

Your email address will not be published. Required fields are marked *