ಕಾಂಗ್ರೆಸ್ ಬಗ್ಗೆ ಅಪಪ್ರಚಾರ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸ್ ಠಾಣೆಗೆ ದೂರು

ಕಾಂಗ್ರೆಸ್ ಬಗ್ಗೆ ಅಪಪ್ರಚಾರ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸ್ ಠಾಣೆಗೆ ದೂರು

ಬೆಂಗಳೂರು: ಲೇಖಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೂಲಿಬೆಲೆ ಸುಳ್ಳು ಆರೋಪ ಮಾಡಿ ಕಾಂಗ್ರೆಸ್ ಪಕ್ಷವನ್ನ ತೇಜೋವಧೆ ಮಾಡ್ತಿದ್ದಾರೆ ಅಂತ ಅವರು ದೂರಿದ್ದಾರೆ.

ಕಳೆದ ಜೂನ್ 7 ರಂದು ಫೇಸ್​ಬುಕ್​ ಪೋಸ್ಟ್ ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, ಜನರಿಗೆ ಆಕ್ಸಿಜನ್ ಸಿಗದಂತೆ ಕಾಂಗ್ರೆಸ್ ಅಕ್ರಮ ದಾಸ್ತಾನು ಮಾಡಿತ್ತು. ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕ್ ಮಾಡಿ ಜನ ಸಾಯುವಂತೆ ಮಾಡಿತ್ತು. ಅಮಾಯಕರ ಸಾವನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ ವೈಭವೀಕರಿಸಿ ಭಾರತದ ಮಾನ ಹರಾಜು ಹಾಕಿತ್ತು ಎಂದಿದ್ದರು ಎನ್ನಲಾಗಿದೆ.

ಈ ಬಗ್ಗೆ ಆರ್ಟಿಕಲ್ ಬರೆದು ಫೇಸ್​ಬುಕ್​ನಲ್ಲಿ ಪೊಸ್ಟ್ ಮಾಡಿದ್ದ ಕಾರಣ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಹನುಮಂತನಗರ ಬ್ಲಾಕ್ ಕಾಂಗ್ರೆಸ್​ ವತಿಯಿಂದ ದೂರು ಸಲ್ಲಿಸಲಾಗಿದೆ.

The post ಕಾಂಗ್ರೆಸ್ ಬಗ್ಗೆ ಅಪಪ್ರಚಾರ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸ್ ಠಾಣೆಗೆ ದೂರು appeared first on News First Kannada.

Source: newsfirstlive.com

Source link