ಕಾರವಾರದಲ್ಲಿ ಮೀನುಗಾರಿಗೆ ತೆರಳಿದ್ದ ಬೋಟ್​ಗೆ ಬೆಂಕಿ; 7 ಜನರ ರಕ್ಷಣೆ


ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್​ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಬೋಟ್​ನಲ್ಲಿದ್ದ 7 ಜನ ಮೀನುಗಾರರನ್ನ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.

ಕಾರವಾರದ ಅರಬ್ಬಿ ಸಮುದ್ರದ ಲೈಟ್​​ಹೌಸ್ ಬಳಿಯ ಹತ್ತು ನಾಟಿಕನ್ ದೂರದಲ್ಲಿ ಈ ಘಟನೆ ನಡೆದಿದೆ. ಮಲ್ಪೆಯ ‘ವರದಾ’ ಹೆಸರಿನ ಬೋಟ್ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ಇಂಜಿನ್ ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ.

ಇನ್ನು ಬೋಟ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ತಕ್ಷಣ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *