ಬೆಂಗಳೂರು: ಕಾರು, ಎರಡು ಆಟೋ, ಮಿನಿ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ, ಚಾಲಕ ನೋರ್ವ ಸಾವನ್ನಪ್ಪಿರುವ ಘಟನೆ ನಗರದ ಇಂದಿರಾ ನಗರದ 80ಫೀಟ್ ರಸ್ತೆಯಲ್ಲಿ ನಡೆದಿದೆ.
ನಾಲ್ಕು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಹಲಸೂರು ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಕ್ತ ಸಿಕ್ತವಾಗಿದ್ದ ಕಾರು ಚಾಲಕರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಮೊದಲಿಗೆ ನಂದಿತಾ ಚೌಂದ್ರಿ ಬೆನ್ಜ್ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬೆನ್ಜ್ ಕಾರು ಚಾಲಕನ ಒವರ್ ಸ್ಪೀಡ್ ನಿಂದಲೇ ದುರ್ಘಟನೆ ಸಂಭವಿಸಿದೆ. ಸದ್ಯ ಪೊಲೀಸರು ಸ್ಥಳದಿಂದ ವಾಹನಗಳನ್ನು ತೆರುವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಘಟನೆ ಸಂಬಂಧ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.