ಲಕ್ನೋ: ನವಜಾತ ಶಿಶುವನ್ನು ದಂಪತಿ ಉದ್ಯಮಿಗಳಿಗೆ 1.5 ಲಕ್ಷ ರೂಪಾಯಿಗೆ ಮಾರಿದ ಅಮಾನುಷ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ.

ದಂಪತಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ತಮ್ಮ ಮಗುವನ್ನೇ ಮಾರಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಮಗುವಿನ ಅಜ್ಜ, ಅಜ್ಜಿಯಂದಿರು ಗುರುವಾರ ಪೊಲೀಸರನ್ನು ಸಂಪರ್ಕಿಸಿ ಪೋಷಕರ ವಿರುದ್ಧ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ತಿರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಂಪತಿಗೆ ಮೂರು ತಿಂಗಳ ಹಿಂದೆ ಮಗು ಜನಿಸಿದ ಮಗುವಾಗಿದೆ. ಮಗಳು ಮತ್ತು ಅಳಿಯ ಮಗುವನ್ನು, ಗುರ್ಸಹೈಗಂಜ್ ಮೂಲದ ಉದ್ಯಮಿಯೊಬ್ಬರಿಗೆ 1.5 ಲಕ್ಷ ರೂ.ಗೆ ಮಾರಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರ್ ಕೊಳ್ಳಲು ಈ ಕೆಲಸ ಮಾಡಿದ್ದಾರೆ ಮಗುವಿನ, ಅಜ್ಜ, ಅಜ್ಜಿ ಪೊಲೀಸರ ಬಳಿ ಆರೋಪಿಸಿದ್ದಾರೆ.

 

ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ.

The post ಕಾರ್ ಖರೀದಿಸಲು ಕಂದಮ್ಮನನ್ನು ಮಾರಿದ ದಂಪತಿ appeared first on Public TV.

Source: publictv.in

Source link