ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಾವೇರಿಪುರ ವಾರ್ಡಿನ ಕುಟುಂಬಗಳಿಗೆ ವಸತಿ ಸಚಿವ ವಿ.ಸೋಮಣ್ಣ ಫುಡ್ ಕಿಟ್ ವಿತರಿಸುವ ಮೂಲಕ ನೆರವಾಗಿದ್ದಾರೆ.

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾವೇರಿಪುರ ವಾರ್ಡಿನಲ್ಲಿ ಕೋವಿಡ್ ಸಂಕಷ್ಟಕ್ಕೆ ಒಳಗಾದ ಆರ್ಥಿಕವಾಗಿ ಹಿಂದುಳಿದವರು, ಬಡವರು, ಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಆಹಾರಧಾನ್ಯ ಕಿಟ್ ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು, ಕೋವಿಡ್ ಸಂಕಷ್ಟಕ್ಕೆ ಒಳಗಾಗಿರುವ ದೇಶದ 80 ಕೋಟಿ ಜನರಿಗೆ ವರ್ಷಾಂತ್ಯದವರೆಗೆ ಉಚಿತ ಆಹಾರಧಾನ್ಯಗಳನ್ನು ವಿತರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಬಡವರಿಗೆ ನಗದು ಪರಿಹಾರ ಸೇರಿದಂತೆ ಉಪಯುಕ್ತ ಹಲವು ಪ್ಯಾಕೇಜ್ ಗಳನ್ನು ಘೋಷಿಸಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸಹ ಬಡ ಜನರು ಹೆಚ್ಚಾಗಿದ್ದು, ಕ್ಷೇತ್ರದ ಜನರಿಗೆ ಉತ್ತಮ ಗುಣಮಟ್ಟದ ಆಹಾರಧಾನ್ಯ ವಿತರಣೆ ಮಾಡಲಾಗುತ್ತಿದೆ. ಜನತೆ ಭಯಭೀತರಾಗಬಾರದು ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ಮಂಡಲಾಧ್ಯಕ್ಷ ವಿಶ್ವನಾಥಗೌಡ, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ದಾಸೇಗೌಡ, ವಾಗೀಶ್, ಮೋಹನ್ ಕುಮಾರ್, ಉಮಾಶಂಕರ್ ಮುಂತಾದ ಕಾರ್ಯಕರ್ತರು ಸಚಿವರ ಜೊತೆ ಇದ್ದರು.

The post ಕಾವೇರಿಪುರ ವಾರ್ಡಿನಲ್ಲಿ ಫುಡ್ ಕಿಟ್ ವಿತರಿಸಿದ ಸೋಮಣ್ಣ appeared first on Public TV.

Source: publictv.in

Source link