ಮಂಡ್ಯ: ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿರಿಯ ರೈತ ಹೋರಾಟಗಾರ ಮತ್ತು ಮಾಜಿ ಸಂಸದ ಜಿ.ಮಾದೇಗೌಡ (94) ನಿಧನರಾಗಿದ್ದಾರೆ. ಸುಮಾರು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರು, ಮಂಡ್ಯದ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಿ ಮಾದೇಗೌಡ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು..1962 ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1989,1995 ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980-83 ರವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು. ಹಲವು ರೈತಪರ ಹೋರಾಟಗಳಲ್ಲಿ ಮಾದೇಗೌಡರು ಪಾಲ್ಗೊಂಡಿದ್ದರು.

The post ಕಾವೇರಿ ಹೋರಾಟದ ಮುಂಚೂಣಿ ನಾಯಕ, ಮಾಜಿ ಸಂಸದ ಜಿ. ಮಾದೇಗೌಡ ಇನ್ನಿಲ್ಲ appeared first on News First Kannada.

Source: newsfirstlive.com

Source link