ಕಾಶ್ಮೀರದಲ್ಲಿ ಭೂಕುಸಿತ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ – Kashmir landslide Death toll rises to 4 in landslides details in kannada


ನಿರ್ಮಾಣಹಂತದ ರಾಟಲ್ ಪವರ್ ಪ್ರಾಜೆಕ್ಟ್ ಸ್ಥಳದಲ್ಲಿ ನಡೆದ ಭೂಕುಸಿತದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ಸ್ಥಗಿತಗೊಳಿಸಲಾಗಿದೆ.

ಕಾಶ್ಮೀರದಲ್ಲಿ ಭೂಕುಸಿತ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಕಾಶ್ಮೀರ: ಮೆಗಾ ಪವರ್ ಪ್ರಾಜೆಕ್ಟ್ ಸೈಟ್‌ನಲ್ಲಿ ಭೂಕುಸಿತ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಪವರ್ ಪ್ರಾಜೆಕ್ಟ್ ಸೈಟ್ ಬಳಿ ಕಾರ್ಮಿಕರು ಸಂಪರ್ಕ ರಸ್ತೆ ನಿರ್ಮಿಸುತ್ತಿದ್ದ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಅಲ್ಲದೆ ರಕ್ಷಣಾ ಕಾರ್ಯದ ಮೂಲಕ ಆರು ಮಂದಿಯನ್ನು ರಕ್ಷಿಸಲಾಗಿದೆ. ಕಿಶ್ತ್ವಾರ್‌ನಲ್ಲಿ ನಿರ್ಮಿಸ್ತಿರುವ ಜಲವಿದ್ಯುತ್ ಸ್ಥಾವರದಲ್ಲಿ ಕಾಮಗಾರಿ ಪ್ರಗತಿಯಲ್ಲಿ ಇತ್ತು. ಆದರೆ ನಿನ್ನೆ (ಅ29) ಈ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ. ಕೂಡಲೇ ರಕ್ಷಣಾ ಕಾರ್ಯ ಆರಂಭಗೊಳಿಸಲಾಗಿದೆ. ಅದಾಗ್ಯೂ ಘಟನೆಯ ವೇಳೆ ಸ್ಥಳದಲ್ಲಿದ್ದ ಜೆಸಿಬಿ ಚಾಲಕ ಸೇರಿದಂತೆ ಒಟ್ಟು ನಾಲ್ವರು ದುರ್ಮರಣ ಹೊಂದಿದ್ದಾರೆ. ಅಲ್ಲದೆ, ಅವಶೇಷಗಳಡಿ ಸಿಲುಕಿದ್ದ 6 ಜನರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶೋಧ ಕಾರ್ಯವನ್ನು ರಕ್ಷಣಾ ಸಿಬ್ಬಂದಿಗಳು ಮುಕ್ತಾಯಗೊಳಿಸಿರುವುದಾಗಿ ಕಿಶ್ತ್ವಾರ್‌ ಜಿಲ್ಲಾಧಿಕಾರಿ ದೇವಾಂಶ್ ಯಾದವ್‌ ಮಾಹಿತಿ ನೀಡಿದ್ದಾರೆ.

ಸಂಜೆ ದ್ರಬ್ಶಲ್ಲಾ-ರಾಟಲ್ ಜಲವಿದ್ಯುತ್ ಯೋಜನೆಯಲ್ಲಿ ನಡೆದ ಘಟನೆಯ ನಂತರ ಗಾಯಗೊಂಡ ಸ್ಥಿತಿಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರ ಕೆಲವರನ್ನು ರಕ್ಷಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿತ್ತು. ರಾಟಲ್ ಪವರ್ ಪ್ರಾಜೆಕ್ಟ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಜೆಸಿಬಿ ಆಪರೇಟರ್ ಮತ್ತು ಇತರ ಕೆಲವರು ಕೆಲಸದಲ್ಲಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಮತ್ತೆ ಭೂಕುಸಿತ ಸಂಭವಿಸಿದ್ದು, ಇನ್ನೂ ಕೆಲವು ಮಂದಿ ಸಿಲುಕಿಕೊಂಡಿದ್ದರು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಕೆಲವರನ್ನು ರಕ್ಷಿಸಿ ಸಮೀಪದ ದೋಡಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.