ಕಾಶ್ಮೀರದ ರಾಜೌರಿಯ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ; ಮೂವರು ಸೈನಿಕರ ಸಾವು, ಇಬ್ಬರು ಉಗ್ರರ ಹತ್ಯೆ | 3 Soldiers Killed in Suicide Attack in Jammu Kashmir Rajouri Army Base 2 Terrorist Dead


ರಾಜೌರಿಯ ಸೇನಾ ಶಿಬಿರದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಇಂದು ಮುಂಜಾನೆ ಹೊಡೆದುರುಳಿಸಲಾಗಿದೆ. ಈ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದು, ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕಾಶ್ಮೀರದ ರಾಜೌರಿಯ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ; ಮೂವರು ಸೈನಿಕರ ಸಾವು, ಇಬ್ಬರು ಉಗ್ರರ ಹತ್ಯೆ

ಭಯೋತ್ಪಾದಕ ದಾಳಿ

ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಉಗ್ರರು ಆರ್ಮಿ ಕಂಪನಿ ಕಾರ್ಯಾಚರಣಾ ನೆಲೆಯ ಮೇಲೆ ಆತ್ಮಾಹುತಿ ದಾಳಿ (Suicide Attack) ನಡೆಸಿದ್ದಾರೆ. ಈ ವೇಳೆ ಆ ಇಬ್ಬರು ಉಗ್ರರನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಆದರೆ, ಈ ಕಾರ್ಯಾಚರಣೆ ವೇಳೆ ಮೂವರು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಉಗ್ರರ ಮೇಲಿನ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ (Indian Army) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‌ನಲ್ಲಿರುವ ಸೇನಾ ಶಿಬಿರದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಇಂದು ಮುಂಜಾನೆ ಹೊಡೆದುರುಳಿಸಲಾಗಿದೆ. ಈ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದು, ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ. ಭದ್ರತಾ ಅಧಿಕಾರಿಗಳು ಆ ಪ್ರದೇಶವನ್ನು ಸುತ್ತುವರೆದಿದ್ದಾರೆ. ಹೆಚ್ಚುವರಿ ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

TV9 Kannada


Leave a Reply

Your email address will not be published. Required fields are marked *