ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಮಾಹಿತಿ ನೀಡಿರುವ ಅವರು, ಮೇ 24ರ ವರೆಗೆ ನಮ್ಮ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ.

ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 20 ಜನ ಸೇರಿದಂತೆ ಒಟ್ಟು 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಳ್ಳಿಗಳಲ್ಲಿ ಸಹ ಬ್ಲ್ಯಾಕ್ ಫಂಗಸ್ ಸೋಂಕಿತರು ಹೆಚ್ಚಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

The post ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ appeared first on Public TV.

Source: publictv.in

Source link