ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ನೇಣಿಗೆ ಶರಣು

ಹುಬ್ಬಳ್ಳಿ: ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ನೇಣಿಗೆ ಶರಣಾದ ಘಟನೆ ನಡೆದಿದೆ.

ಹುಬ್ಬಳ್ಳಿಯ ರಣದಂಭ ಕಾಲೋನಿಯ 78 ವರ್ಷದ ವೃದ್ದನಿಗೆ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಿಮ್ಸ್ ಆಸ್ಪತ್ರೆಯ 303 ರ ವಾರ್ಡನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವೃದ್ದ ನಿನ್ನೆ ಮಧ್ಯರಾತ್ರಿ ಆಸ್ಪತ್ರೆಯಲ್ಲಿನ ಸಿಬ್ಬಂದಿ ಹಾಗೂ ಸಂಭದಿಕರ ಕಣ್ತಪ್ಪಿಸಿ ಶೌಚಕ್ಕೆ ತೆರಳಿದ್ದನು. ಈ ವೇಳೆ ಉಟ್ಟಿದ್ದ ಲುಂಗಿಯನ್ನ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಜಸ್ಥಾನ ಸರ್ಕಾರದಲ್ಲಿ ಭಿನ್ನಮತ ಸ್ಫೋಟ – 9 ಸಚಿವ ಸ್ಥಾನಕ್ಕೆ ಪಟ್ಟು

ಕೋವಿಡ್ ದೃಡಪಟ್ಟ ಹಿನ್ನೆಲೆಯಲ್ಲಿ ಭಯದಿಂದ ವೃದ್ದ ನೇಣು ಬಿಗಿದುಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ವಿದ್ಯಾನಗರ ಪೊಲೀಸರಯ ಪರಿಶೀಲನೆ ನಡೆಸಿ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

The post ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ನೇಣಿಗೆ ಶರಣು appeared first on Public TV.

Source: publictv.in

Source link