ಚಿತ್ರದುರ್ಗ: ಕಿರಾಣಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೋರ್ವ ಸಜೀವವಾಗಿ ದಹನವಾದ ಘಟನೆ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಪ್ರಕಾಶ್ ( 55) ಎಂದು ಗುರುತಿಸಲಾಗಿದೆ. ಇನ್ನು ಪ್ರಕಾಶ್​ ಪತ್ನಿ ಗಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ದಾವಣಗೆರೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೆಯಲ್ಲಿಯೇ ಕಿರಾಣಿ ಅಂಗಡಿ ನಡೆಸುತ್ತಿದ್ದ ಪ್ರಕಾಶ್​ ಇಂದು ಮುಂಜಾನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಿರಾಣಿ ಅಂಗಡಿಯಲ್ಲಿದ್ದ ಸಾಮಾನುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಚಿತ್ರಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ, ಮೂವರ ಬಂಧನ

The post ಕಿರಾಣಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ appeared first on News First Kannada.

Source: newsfirstlive.com

Source link