ಕುಟುಂಬ ಸಮೇತರಾಗಿ ಆಗಮಿಸಿ ಪುನೀತ್ ಸಮಾಧಿಗೆ ನಮನ ಸಲ್ಲಿಸಿದ ರೇಣುಕಾಚಾರ್ಯ | Renukacharya and his family visits Puneeth Rajkumar samadhi in bengaluru


ಕುಟುಂಬ ಸಮೇತರಾಗಿ ಆಗಮಿಸಿ ಪುನೀತ್ ಸಮಾಧಿಗೆ ನಮನ ಸಲ್ಲಿಸಿದ ರೇಣುಕಾಚಾರ್ಯ

ನಟ ಪುನೀತ್ ರಾಜ್ ಕುಮಾರ್ ಸಮಾಧಿಗೆ ರೇಣುಕಾಚಾರ್ಯ ನಮನ

ಬೆಂಗಳೂರು: ಕುಟುಂಬ ಸಮೇತರಾಗಿ ಆಗಮಿಸಿ, ನಟ ಪುನೀತ್ ರಾಜ್ ಕುಮಾರ್ ಸಮಾಧಿಗೆ ರೇಣುಕಾಚಾರ್ಯ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಗಮಿಸಿದ್ದಾರೆ. ಬಳಿಕ ಮಾತನಾಡಿದ ಅವರು, ನಟ ಪುನೀತ್ ಮಾಡಿರುವ ಸೇವೆ ನಮಗೆ ಆದರ್ಶವಾಗಿದೆ. ನಟ ಪುನೀತ್ ಬಗ್ಗೆ ನನಗೆ ವಿಶೇಷವಾದ ಗೌರವ ಇದೆ ಎಂದು ಹೇಳಿದ್ದಾರೆ.

ಪುನೀತ್ ಮಾಡಿರುವ ಸೇವೆ ನನಗೆ ತುಂಬಾ ಇಷ್ಟವಾಗಿದೆ. ಹೀಗಾಗಿ ದೀಪಾವಳಿ ದಿನ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದೆ. ಪುನೀತ್ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ. ಕುಟುಂಬಸ್ಥರು ಒಪ್ಪಿದರೆ ನಟ ಪುನೀತ್ ರಾಜ್‌ ಕುಮಾರ್ ನಡೆಸುತ್ತಿದ್ದ ಶಕ್ತಿಧಾಮಕ್ಕೆ ನಮ್ಮ ಕೈಯಲ್ಲಾದ ಸಹಾಯ ಮಾಡುತ್ತೇವೆ. ಪುನೀತ್ ಹಾದಿಯಲ್ಲೇ ನಾವು ನೇತ್ರದಾನ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್ ರಾಜ್ ಅಗಲಿ ಇಂದಿಗೆ 8 ದಿನಗಳಾಯಿತು. ಅವರ ಅಕಾಲಿಕ ನಿಧನದಿಂದ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ನಾಡಿಗೆ ತುಂಬಲಾರದ ನಷ್ಟವಾಗಿದೆ. ಅಪ್ಪು ಸಾಮಾಜಿಕ ಕಳಕಳಿಯ ಚಿತ್ರಗಳು ನಮಗೆ ಇಷ್ಟವಾಗಿವೆ. ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಭಾವಚಿತ್ರ ಹಾಕಿ ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಕೊರೊನಾ ಅವಧಿಯಲ್ಲಿ ನಾನು ರಸಮಂಜರಿ ಕಾರ್ಯಕ್ರಮಗಳನ್ನು ಮಾಡಿದ್ದೆ. ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಪುನೀತ್ ರಾಜ್ ಕುಮಾರ್​ ಅವರನ್ನು ಕ್ಷೇತ್ರಕ್ಕೆ ಕರೆದೊಯ್ದು ಕಾರ್ಯಕ್ರಮ ನೀಡಬೇಕೆಂದಿದ್ದೆ ಎಂದು ಬೆಂಗಳೂರಿನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಇದನ್ನೂ ಓದಿ:
Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ

ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

TV9 Kannada


Leave a Reply

Your email address will not be published. Required fields are marked *