ಧಾರವಾಡ: ಕುಡಿಯಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆ ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ತೆಲುಗರ ಓಣಿಯಲ್ಲಿ ನಡೆದಿದೆ.

ತಂದೆ ಫಕೀರಪ್ಪ ಹಿರೇಕುಂಬಿ ತನ್ನ ಮಗ ಬಸವರಾಜ ಹಿರೇಕುಂಬಿ (36)ಯನ್ನು ಕೊಲೆ ಮಾಡಿದ್ದಾನೆ. ಕುಡಿಯಲು ಹಣ ನೀಡುವಂತೆ ನಿತ್ಯ ಮಗ ಪೀಡಿಸುತ್ತಿದ್ದ ಎನ್ನಲಾಗಿದ್ದು, ಕಳೆದ ರಾತ್ರಿ ಇದೇ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ ಆರಂಭವಾಗಿದೆ. ಕೊಲೆಯಾದ ಮಗ ಬಸವರಾಜ್, ತಾಯಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಈ ವೇಳೆ ಫಕ್ಕೀರಪ್ಪ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಬಸವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಶಹರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

The post ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ, ತಾಯಿ ಮೇಲೂ ಹಲ್ಲೆ- ಬೇಸತ್ತ ತಂದೆಯಿಂದ ಮಗನ ಕೊಲೆ appeared first on Public TV.

Source: publictv.in

Source link