ಬೆಂಗಳೂರು: ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಬೈಕ್​​​ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆ ಬಳಿ ನಡೆದಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್​​ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್​ ಸವಾರನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿಕೊಂಡಿದೆ. ಈ ವೇಳೆ ದಾರವನ್ನು ಬಿಡಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ಸವಾರನ ಕೈಬೆರಳು ಕಟ್​​ ಆಗಿದ್ದು, ಕುತ್ತಿಗೆಗೆ ಗಂಭೀರ ಗಾಯವಾಗಿದೆ.
ಸವಾರನ ಒದ್ದಾಟವನ್ನು ಗಮನಿಸಿದ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಸದ್ಯ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಆಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಟೆರೆಸ್ ನಿಂದ ಗಾಳಿಪಟ ಹಾರಿಸಿದ ಸಂದರ್ಭದಲ್ಲಿ ದಾರ ಕಟ್ ಆಗಿ ಅಪಾಯಕ್ಕೆ ದಾರಿ ಮಾಡಿಕೊಟ್ಟಿದೆ ಎಂಬ ಶಂಕೆ ವ್ಯಕ್ತವಾಗಿದೆ. ನಗರದಲ್ಲಿ ಹಲವರ ಜೀವಕ್ಕೆ ಹಾಗೂ ಪ್ರಾಣಿ, ಪಕ್ಷಿಗಳಿಗೆ ಅಪಾಯ ತಂದೊಡ್ಡುತ್ತಿರುವ ಗಾಳಿಪಟ ಹಾರಿಸೋದನ್ನ ಬ್ಯಾನ್ ಮಾಡಿ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು ಎಂದು ಗಾಯಾಳು ಬೈಕ್ ಸವಾರ ಮನವಿ ಮಾಡಿದ್ದಾರೆ.

The post ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿ ಬೈಕ್​​​ ಸವಾರನಿಗೆ ಗಂಭೀರ ಗಾಯ, ಬೆರಳು ಕಟ್​​ appeared first on News First Kannada.

Source: newsfirstlive.com

Source link